‘ನಾನೇನು ರೇಪ್‌ ಮಾಡಿದ್ದೀನಾ, ಉಪಮುಖ್ಯಮಂತ್ರಿ ಸ್ಥಾನ ಕಿತ್ತುಕೊಂಡಿದ್ದೇಕೆ’; ಬಿಜೆಪಿಗೆ ಲಕ್ಷ್ಮಣ ಸವದಿ ಪ್ರಶ್ನೆ

Date:

  • ಬಿಜೆಪಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ, ಅವಮಾನ ಸಾಕಷ್ಟು ಆಗಿದೆ
  • ಪಕ್ಷದ ಸದಸ್ಯತ್ವಕ್ಕೆ, ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವೆ

“ಯಾವ ಕಾರಣವೂ ಹೇಳದೇ ನನ್ನನ್ನು ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರು. ನಾನೇನು ರೇಪ್‌ ಮಾಡಿದ್ದೀನಾ, ಯಾರದಾದರೂ ಸೆರಗು ಎಳೆದಿದ್ದೀನಾ, ಭ್ರಷ್ಟಾಚಾರ ಮಾಡಿದ್ದೀನಾ?…”

ಬಿಜೆಪಿ ವಿರುದ್ಧ ಹೀಗೆ ಆಕ್ರೋಶದ ಮಾತುಗಳನ್ನು ಆಡಿದವರು ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ. ಅಥಣಿಯಲ್ಲಿ ಗುರುವಾರ ಮಾತನಾಡಿದ ಅವರು, “ಬಿಜೆಪಿಯಲ್ಲಿ ನನಗೆ ಮಾನಸಿಕವಾಗಿ ಹಿಂಸೆ, ಅವಮಾನ ಸಾಕಷ್ಟು ಆಗಿದೆ. ಇಷ್ಟು ದಿನ ಎಲ್ಲ ಸಹಿಸಿಕೊಂಡು ಇದ್ದೆ” ಎಂದರು.

“ಉಪ ಮುಖ್ಯಮಂತ್ರಿ ಸ್ಥಾನ ಕಿತ್ತುಕೊಂಡಾಗಲೂ ನಾನು ಯಾರ ವಿರುದ್ಧವೂ ತುಟಿ ಬಿಚ್ಚಲಿಲ್ಲ. ರಾಜೀನಾಮೆ ಕೊಡು ಅಂತ ಕೇಳಿದ್ದರೆ ಸಂತೋಷದಿಂದ ಕೊಡುತ್ತಿದ್ದೆ. ಅವಮಾನ ಮಾಡಬೇಕು ಎಂತಲೇ ಏಕಾಏಕಿ ತೆಗೆದು ಹಾಕಲಾಯಿತು. ನನ್ನ ತಾಳ್ಮೆಯ ಕಟ್ಟೆ ಈಗ ಒಡೆದಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿ ಎಲ್‌ ಸಂತೋಷ್ ಅವರು ಇಂದು ಬೆಳಗ್ಗೆ ತುಂಬಾ ಸಲ ಕಾಲ್‌ ಮಾಡಿದ್ದಾರೆ. ನಾನೂ ಸಿಟ್ಟಲ್ಲಿ ಏನಾದರೂ ಮಾತನಾಡಿದರೆ ಅವರಿಗೆ ಬೇಸರವಾದೀತು ಎಂದು ಕರೆ ಸ್ವೀಕರಿಸಿಲ್ಲ. ಅವರು ನನ್ನ ಗುರು” ಎಂದರು.

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿಗಳು

“ಬಿಜೆಪಿ ಟಿಕೆಟ್‌ ನೀಡಿಲ್ಲ ಎಂದು ನಾನು ಪಕ್ಷ ಬಿಡುತ್ತಿಲ್ಲ. ಸ್ವಾಭಿಮಾನಕ್ಕೆ ಬಹಳ ಧಕ್ಕೆಯಾಗಿದೆ. ಇಲ್ಲಿದ್ದು ಪ್ರಯೋಜನವಿಲ್ಲ ಅಂತ ಅನ್ನಿಸಿದ್ದು, ಶುಕ್ರವಾರ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಹಾಗೆಯೇ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವೆ” ಎಂದು ತಿಳಿಸಿದರು.

“ಸಂಸದ ಅಣ್ಣಾಸಾಹೇಬ ಜೊಲ್ಲೆ ನನ್ನನ್ನು ಭೇಟಿ ಮಾಡಿದ್ದಾರೆ. ಆದರೆ, ಅದು ಸೌಜನ್ಯದ ಭೇಟಿ ಅಷ್ಟೇ. ರಾಜಕೀಯವಾಗಿ ನಾನು ಏನೂ ಮಾತನಾಡಿಲ್ಲ” ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...