ಆಸಕ್ತರು ಗಮನಿಸಿ | ಶಿವಣ್ಣನ ಚಿತ್ರಕ್ಕೆ ನಾಯಕಿಗಾಗಿ ಹುಡುಕಾಟ

Date:

  • ಆಡಿಷನ್‌ಗೆ ಕರೆ ನೀಡಿದ ʼ45ʼ ಚಿತ್ರತಂಡ
  • ಅರ್ಜುನ್‌ ಜನ್ಯ ನಿರ್ದೇಶನದ ಚೊಚ್ಚಲ ಚಿತ್ರ

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಮತ್ತು ಅರ್ಜುನ್‌ ಜನ್ಯ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ʼ45ʼ ಚಿತ್ರದ ‘ಪ್ರೀ ಪ್ರೊಡಕ್ಷನ್‌’ ಕೆಲಸಗಳು ಭರದಿಂದ ಸಾಗಿವೆ. ಸದ್ಯ ನಾಯಕಿಯ ಹುಡುಕಾಟದಲ್ಲಿರುವ ಚಿತ್ರತಂಡ ಆಸಕ್ತರಿಗೆ ಆಡಿಷನ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ʼ45ʼ ಚಿತ್ರತಂಡ ಆಡಿಷನ್‌ಗೆ ಕರೆ ನೀಡಿರುವ ಪೋಸ್ಟರ್‌ ವೈರಲ್‌ ಆಗಿದೆ. ವಿಶೇಷ ಪೋಸ್ಟರ್‌ನಲ್ಲಿ ನಾಯಕಿಗಾಗಿ ಹುಡುಕಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಚೆನ್ನಾಗಿ ಬಲ್ಲ, 18 ರಿಂದ 28 ವಯೋಮಿತಿಯೊಳಗಿನ ಯುವತಿಯರು ಆಡಿಷನ್‌ನಲ್ಲಿ ಭಾಗಿಯಾಗಬಹುದು. ಸಹಜ ಭಾವಚಿತ್ರಗಳು ಮತ್ತು ನಟನೆಯ ಸರಳ ವಿಡಿಯೋಗಳನ್ನು ಪೋಸ್ಟರ್‌ನ ಕೊನೆಯಲ್ಲಿ ನೀಡಲಾಗಿರುವ ಇ-ಮೇಲ್‌ ವಿಳಾಸಕ್ಕೆ ಕಳುಹಿಸುವಂತೆ ತಿಳಿಸಲಾಗಿದೆ.

ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ ಖ್ಯಾತಿ ಗಳಿಸಿದ್ದ ಅರ್ಜುನ್‌ ಜನ್ಯ, ʼ45ʼ ಚಿತ್ರದ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ಶಿವರಾಜ್‌ ಕುಮಾರ್‌ ಮುಖ್ಯಭೂಮಿಕೆ ನಿಭಾಯಿಸುತ್ತಿರುವ ಈ ಚಿತ್ರದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ಮತ್ತು ʼಒಂದು ಮೊಟ್ಟೆಯ ಕಥೆʼ ಖ್ಯಾತಿಯ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಶಿವರಾಜ್‌ ಕುಮಾರ್‌ ʼಘೋಸ್ಟ್‌ʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ʼ45ʼ ಚಿತ್ರದ ಶೂಟಿಂಗ್‌ ಪ್ರಾರಂಭಗೊಳ್ಳಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಸಿದ್ಧಗೊಳ್ಳುತ್ತಿರುವ ಈ ಬಹುನಿರೀಕ್ಷಿತ ಚಿತ್ರಕ್ಕೆ ರಮೇಶ್‌ ರೆಡ್ಡಿ ಬಂಡವಾಳ ಹೂಡಿದ್ದು, ಅರ್ಜುನ್‌ ಜನ್ಯ ಅವರೇ ಸಂಗೀತ ನಿರ್ದೇಶನದ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...