ರಾಹುಲ್ ಗಾಂಧಿ ಅನರ್ಹ | ಕೀಳುಮಟ್ಟದ ರಾಜಕಾರಣ ಎಂದ ಪ್ರಕಾಶ್ ರಾಜ್

Date:

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿದ ಪ್ರಕಾಶ್ ರಾಜ್

ದೇಶಕ್ಕಾಗಿ ಧ್ವನಿ ಎತ್ತಬೇಕಿರುವ ಸಂದರ್ಭವಿದು ಎಂದ ನಟ

ಮೋದಿ ಉಪನಾಮದ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಆಡಳಿತಾರೂಢ ಬಿಜೆಪಿಯ ಈ ನಡೆಗೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಬಹುಭಾಷಾ ನಟ ಪ್ರಕಾಶ್ ರಾಜ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿರುವ ಆದೇಶ ಪ್ರತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಪ್ರಕಾಶ್ ರಾಜ್, “ಈ ರೀತಿ ಕೀಳುಮಟ್ಟದ, ಪ್ರಗತಿಗೆ ಮಾರಕವಾಗುಂತಹ ರಾಜನೀತಿ ಮಾಡಲು‌ ನಾಚಿಕೆಯಾಗಬೇಕು. ಇದು ದೇಶಕ್ಕಾಗಿ ನಾವೆಲ್ಲರೂ ಧ್ವನಿ ಎತ್ತ ಬೇಕಿರುವ ಸಂದರ್ಭ. ಇಂತಹ ಹೊತ್ತಿನಲ್ಲಿ ನಾವು ಸುಮ್ಮನೆ ಕೂತರೆ, ಇವತ್ತಿನ ನಮ್ಮ ಮೌನಕ್ಕೆ ನಾಳೆ ದಿನ ನಾವೇ ದುಬಾರಿ ಬೆಲೆ ತೆರಬೇಕಾಗುತ್ತದೆ” ಎಂದು ಜನ ಸಾಮಾನ್ಯರನ್ನು ಎಚ್ಚರಿಸುವ ಪ್ರಯತ್ನ ಮಾಡಿದ್ದಾರೆ.

2019ರ ಏಪ್ರಿಲ್ 19ರಂದು ರಾಹುಲ್ ಗಾಂಧಿ ಅವರು ಕರ್ನಾಟಕದ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಹೇಳುತ್ತಾ, “ಎಲ್ಲಾ ಕಳ್ಳರು, ಅಂದರೆ; ಅದು ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಇವರೆಲ್ಲರೂ ಮೋದಿ ಎಂಬ ಉಪನಾಮನ್ನೇಕೆ ಹೊಂದಿದ್ದಾರೆ” ಎಂದು ವ್ಯಂಗ್ಯವಾಡಿದ್ದರು.

ಈ ಹೇಳಿಕೆಯನ್ನು ವಿರೋಧಿಸಿ ಗುಜರಾತ್‌‌ನ ಬಿಜೆಪಿ ಮಾಜಿ ಸಚಿವ ಪೂರ್ಣೇಶ್ ಮೋದಿ ಐಪಿಸಿ ಸೆಕ್ಷನ್ 499 ಮತ್ತು 500 ಅಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇತ್ತೀಚೆಗೆ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಜಿಲ್ಲಾ ನ್ಯಾಯಾಲಯ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ, ಬಳಿಕ ಜಾಮೀನು ಮಂಜೂರು ಮಾಡಿತ್ತು. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...