ಜ.29 ರಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ

Date:

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29 ರಿಂದ ಫೆಬ್ರವರಿ 6 ರವರೆಗೆ ನಡೆಯಲಿದ್ದು, ಮಹಿಳಾ ಸಬಲೀಕರಣ ಈ ಬಾರಿಯ ಚಿತ್ರೋತ್ಸವದ ಪ್ರಮುಖ ಥೀಮ್ ಆಗಿರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಚಿತ್ರೋತ್ಸವದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿ ರಾಜಾಜಿನಗರದ ಲುಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ಗಳಲ್ಲಿ ಪ್ರಮುಖವಾಗಿ ಚಿತ್ರಗಳ ಪ್ರದರ್ಶನ ನಡೆಯಲಿದೆ. ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ (ಚಾಮರಾಜಪೇಟೆ) ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿಯ ಚಿತ್ರಮಂದಿರಗಳಲ್ಲೂ ಪ್ರದರ್ಶನ ಇರಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಹಾಗೂ ಕನ್ನಡ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದುವರೆಗೆ 110ಕ್ಕೂ ಹೆಚ್ಚು ಚಿತ್ರಗಳು ಸಲ್ಲಿಕೆಯಾಗಿವೆ. ಈ ವಿಭಾಗಗಳಿಗೆ ಡಿಸೆಂಬರ್ 31, 2025 ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವಾಗಿದೆ.

ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರಗಳು, 400ಕ್ಕೂ ಅಧಿಕ ಪ್ರದರ್ಶನಗಳ ಮೂಲಕ ಚಿತ್ರೋತ್ಸವ ನಡೆಯಲಿದೆ. ಕಾನ್ಸ್, ಬರ್ಲಿನ್, ವೆನಿಸ್, ಕಾರ್ಲೋವಿ ವೇರಿ, ಲೊಕಾರ್ನೋ, ರಾಟರ್‌ಡ್ಯಾಮ್, ಬುಸಾನ್ ಹಾಗೂ ಟೊರೊಂಟೊ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಪಡೆದ ಹಾಗೂ ಮೆಚ್ಚುಗೆ ಗಳಿಸಿದ ಅನೇಕ ಅಂತಾರಾಷ್ಟ್ರೀಯ ಚಿತ್ರಗಳು ಬೆಂಗಳೂರಿನಲ್ಲಿ ಒಂದೇ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿವೆ.

ಈ ಬಾರಿ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನೂ ಚಿತ್ರೋತ್ಸವದಲ್ಲಿ ವೀಕ್ಷಿಸುವ ಅವಕಾಶ ದೊರೆಯಲಿದೆ. ಪೋಲಿಷ್ ಕಲ್ಚರಲ್ ಸೆಂಟರ್, ಗೋಥೆ ಇನ್‌ಸ್ಟಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಅಲಿಯಾನ್ಸ್ ಫ್ರಾಂಸೇಸ್, ಫ್ರೆಂಚ್ ಇನ್‌ಸ್ಟಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್ ಸಹಯೋಗದಲ್ಲಿ ವಿವಿಧ ದೇಶಗಳ ಆಯ್ದ ಚಿತ್ರಗಳು ಪ್ರದರ್ಶನಗೊಳ್ಳಲಿವೆ.

ಇದನ್ನು ಓದಿದ್ದೀರಾ?: ಕೇರಳಕ್ಕೆ ಕಾಲಿಟ್ಟ ಕೋಮುದ್ವೇಷಿ ಗುಂಪುಹತ್ಯೆಯ ಪಿಡುಗು!

ಪೋಲಿಷ್ ಕಲ್ಚರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್‌ನ ಖ್ಯಾತ ನಿರ್ದೇಶಕ ಅಂದ್ರೆ ವಾಜ್ದಾ ಅವರ ಶತಮಾನೋತ್ಸವದ ಅಂಗವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರ್‌ಅವಲೋಕನ (ರಿಟ್ರೋಸ್ಪೆಕ್ಟಿವ್) ಆಯೋಜಿಸಲಾಗಿದೆ. ಜೊತೆಗೆ ಅಲಿಯಾನ್ಸ್ ಫ್ರಾಂಸೇಸ್ ಬೆಂಗಳೂರು ಹಾಗೂ ಫ್ರೆಂಚ್ ಇನ್‌ಸ್ಟಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸ ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯೂ ಇರಲಿದೆ.

ಚಿತ್ರೋತ್ಸವದ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ನಿರ್ಮಿಸಲಾಗುವುದು. ಇದೇ ಆವರಣದಲ್ಲಿ ಕನ್ನಡ ಚಿತ್ರರಂಗದ 91 ವರ್ಷಗಳ ಸಮೃದ್ಧ ಇತಿಹಾಸವನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವೂ ಏರ್ಪಡಿಸಲಾಗುತ್ತದೆ.

2025–26ನೇ ಸಾಲಿನಲ್ಲಿ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಆಯೋಜನೆಗಾಗಿ ರೂ.7 ಕೋಟಿ ಅನುದಾನವನ್ನು ಒದಗಿಸಲಾಗಿದೆ. ಸಮಾರೋಪ ಸಮಾರಂಭದಲ್ಲಿ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿಗಳು ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಸಭೆಯಲ್ಲಿ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ವಾರ್ತಾ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತ ಹೇಮಂತ್ ನಿಂಬಾಳ್ಕರ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಸೇರಿದಂತೆ ಅಕಾಡೆಮಿ ಸದಸ್ಯರು, ಸಂಘಟನಾ ಸಮಿತಿ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...