71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟಿಸಲಾಗಿದ್ದು, ಚಿದಾನಂದ್ ಎಸ್ ನಾಯಕ್ ನಿರ್ದೇಶನದ ಕನ್ನಡದ ‘ಸನ್‌ಫ್ಲವರ್ಸ್ ವರ್ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ನೀಡಲಾಗಿದೆ.
ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಸಂಜೆ 6 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ 2023ನೇ ಸಾಲಿನ ರಾಷ್ಟ್ರ ಪ್ರಶಸ್ತಿ ವಿಜೇತರ ಹೆಸರುಗಳನ್ನು ಘೋಷಿಸಲಾಯಿತು.
ತೀರ್ಪುಗಾರರು ಸಂಜೆ 4 ಗಂಟೆಗೆ ತಮ್ಮ ವರದಿಯನ್ನು ಮಾಹಿತಿ ಮತ್ತು ಪ್ರಸಾರ ಸಚಿವೆ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ಎಲ್ ಮುರುಗನ್ ಅವರಿಗೆ ಸಲ್ಲಿಸಿದ ನಂತರ ಪ್ರಶಸ್ತಿ ಪ್ರಕಟಿಸಲಾಯಿತು.
ಚಿದಾನಂದ್ ಎಸ್ ನಾಯಕ್ ನಿರ್ದೇಶನದ ಕನ್ನಡದ ‘ಸನ್‌ಫ್ಲವರ್ಸ್ ವಾಸ್ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರ ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದ ಕಾನ್ಸ್ ಪ್ರಶಸ್ತಿಗೆ ಭಾಜನವಾಗಿತ್ತು.
ಬಾಲಿವುಡ್ ನಟ ಶಾರೂಕ್ ಖಾನ್ ಜವಾನ್ ಚಿತ್ರದ ಅಭಿನಯಕ್ಕೆ, ಟ್ವಲ್ತ್ ಫೈಲ್ ಚಿತ್ರದ ನಟನೆಗೆ ವಿಕ್ರಮ್ ಮಿಸ್ತ್ರಿ ಅವರು ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡರೆ, ಮಿಸಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ಅಭಿನಯಕ್ಕೆ ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.





