ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳಲ್ಲಿ ನಟಿಸಿರುವ ನಟಿಯೊಬ್ಬರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎವಿಆರ್ ಗ್ರೂಪ್ ಸಂಸ್ಥಾಪಕ ಆಗಿರುವ ಅರವಿಂದ್ ರೆಡ್ಡಿಯನ್ನು ಬಂಧಿಸಲಾಗಿದೆ.
ಎಸಿಪಿ ಚಂದನ್ ಮತ್ತು ತಂಡದಿಂದ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀಲಂಕಾದಿಂದ ಬೆಂಗಳೂರಿಗೆ ಬರುವಾಗ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಕಳೆದ ತಿಂಗಳು 17ರಂದು ಅರವಿಂದ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಹಾರದಲ್ಲಿ ಗೆದ್ದಿದ್ದು ಜನತಂತ್ರವೋ ಅಥವಾ ಮತಗಳ್ಳತನವೋ?
2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ನೇತೃತ್ವದ ತಂಡ ರಚಿಸಲಾಗಿತ್ತು.
ಕನ್ನಡದಲ್ಲಿ 9ಕ್ಕೂ ಅಧಿಕ ಸಿನಿಮಾಗಳಲ್ಲಿ ಈ ನಟಿ ಅಭಿನಯಿಸಿದ್ದಾರೆ. ಅರವಿಂದ್ ರಿಯಲ್ ಎಸ್ಟೇಟ್ ಉದ್ಯಮಿ. ‘ಮಹಾರಾಜ ಬಳ್ಳಾರಿ ಟಸ್ಕರ್ಸ್’ ಕ್ರಿಕೆಟ್ ತಂಡದ ನಾಯಕ ಕೂಡ ಹೌದು. ಆತ ಸಿನಿಮಾ ನಿರ್ಮಾಪಕ ಕೂಡ ಹೌದು. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದ್ದ.





