‘ಗೌರಿ’ ಸಾಕ್ಷ್ಯಚಿತ್ರಕ್ಕೆ ‘ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ’ ಪ್ರಶಸ್ತಿ

Date:

  • 2017ರ ಸೆ.5ರಂದು ಗೌರಿ ಲಂಕೇಶ್ ಅವರನ್ನು ಹತ್ಯೆಗೈದಿದ್ದ ಸಂಘಿಗಳು
  • 2022ರಲ್ಲಿ ‘ಅತ್ಯುತ್ತಮ ಮಾನವ ಹಕ್ಕು’ ವಿಭಾಗದಲ್ಲಿ ಚಲನಚಿತ್ರ ಪ್ರಶಸ್ತಿ

ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತೆ, ನಿರ್ದೇಶಕಿ ಕವಿತಾ ಲಂಕೇಶ್ ನಿರ್ದೇಶನದ ‘ಗೌರಿ’ ಸಾಕ್ಷ್ಯಚಿತ್ರಕ್ಕೆ ‘ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ’ ಪ್ರಶಸ್ತಿಗೆ ಆಯ್ಕೆಯಾಗಿದೆ. ಮಾಂಟ್ರಿಯಲ್‌ನ ದಕ್ಷಿಣ ಏಷ್ಯಾ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.

2017ರಲ್ಲಿ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರು ಹಿಂದುತ್ವವಾದಿಗಳಿಂದ ಹತ್ಯೆಯಾದರು. ಅವರ ಸಹೋದರಿ ಕವಿತಾ ಅವರು ‘ಗೌರಿ’ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದರು. ಸಾಕ್ಷ್ಯಾಚಿತ್ರವು ‘ಅತ್ಯುತ್ತಮ ದೀರ್ಘ ಸಾಕ್ಷ್ಯಚಿತ್ರ’ ಪ್ರಶಸ್ತಿ ಪಡೆದುಕೊಂಡಿದೆ. ಜೊತೆಗೆ, ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದ ‘ಆಲ್ ದಟ್ ಬೀನ್ಸ್’ ಸಾಕ್ಷ್ಯಚಿತ್ರವೂ ‘ರನ್ನರ್ ಅಪ್’ ಪ್ರಶಸ್ತಿ ಪಡೆದಿದೆ.

‘ಸಾಕ್ಷ್ಯಚಿತ್ರವು 2017ರಲ್ಲಿ ರಾಜಕೀಯ ಹತ್ಯೆಗೊಳಗಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಕುರಿತು ಬೆಳಕು ಚೆಲ್ಲುತ್ತದೆ. ಗೌರಿ ಅವರ ಸಹೋದರಿ ಕವಿತಾ ಲಂಕೇಶ್ ಅವರು ಉತ್ಸಾಹದಿಂದ ನಿರ್ದೇಶಿಸಿದ ಮತ್ತು ನಿರೂಪಿಸಿದ ಡಾಕ್ಯು-ಥ್ರಿಲ್ಲರ್ ಇದಾಗಿದೆ’ ಎಂದು ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಅಮ್‌ಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್’ ಗೌರಿ ಸಾಕ್ಷ್ಯಚಿತ್ರ ನಿರ್ಮಾಣಕ್ಕೆ ಸಹಕರಿಸಿತ್ತು. ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸೆಗೆ ಒಳಗಾಗಿ ಪ್ರಾಣತೆತ್ತ ಪತ್ರಕರ್ತರ ಸಾಕ್ಷ್ಯಚಿತ್ರಗಳನ್ನು ಸಿದ್ಧಪಡಿಸಲು ಸಂಸ್ಥೆ ಕೋರಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು. ಆ ಪೈಕಿ, ಆಯ್ಕೆಯಾದ ನಾಲ್ಕು ಚಿತ್ರಗಳಲ್ಲಿ ‘ಗೌರಿ’ ಸಾಕ್ಷ್ಯಚಿತ್ರವೂ ಒಂದು.

ಈ ಸುದ್ದಿ ಓದಿದ್ದೀರಾ? ಈದಿನ ವಿಶೇಷ | ಸಾಫ್ಟ್‌ವೇರ್‌ ಇಂಜಿನಿಯರ್‌ ʼಡೇರ್‌ಡೆವಿಲ್‌ ಮುಸ್ತಫಾʼ ಸಿನಿಮಾ ಮಾಡಿದ ಕಥೆ

2022ರಲ್ಲಿ ಟೊರೊಂಟೋ ಪ್ರಶಸ್ತಿ

ಟೊರೊಂಟೊ ಮಹಿಳಾ ಚಲನಚಿತ್ರೋತ್ಸವ 2022ರಲ್ಲಿ ಗೌರಿ ಡಾಕ್ಯುಮೆಂಟರಿಗೆ ಟೊರೊಂಟೋ ಪ್ರಶಸ್ತಿ ಬಂದಿದೆ. ಗೌರಿ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಮಾನವ ಹಕ್ಕು ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...