ʻಬ್ಯಾಡ್‌ ಮ್ಯಾನರ್ಸ್‌ʼ ಬಿಡುಗಡೆ ದಿನಾಂಕ ಮುಂದೂಡಿಕೆ

Date:

ಜೂನ್‌ 23ಕ್ಕೆ ಬಿಡುಗಡೆಯಾಗಬೇಕಿದ್ದ ಸಿನಿಮಾ

ಸದ್ಯದಲ್ಲೇ ಘೋಷಣೆಯಾಗಲಿದೆ ಹೊಸ ದಿನಾಂಕ

ಅಭಿಷೇಕ್‌ ಅಂಬರೀಶ್‌ ಮತ್ತು ದುನಿಯಾ ಸೂರಿ ಕಾಂಬಿನೇಶನ್‌ನಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ʼಬ್ಯಾಡ್‌ ಮ್ಯಾನರ್ಸ್‌ʼ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರ್ದೇಶಕ ಸೂರಿ ಮತ್ತು ಚಿತ್ರತಂಡ ಈ ಹಿಂದೆ ಘೋಷಿಸಿದಂತೆ ʼಬ್ಯಾಡ್‌ ಮ್ಯಾನರ್ಸ್‌ʼ ಸಿನಿಮಾ ಇದೇ ಜೂನ್‌ 23ರಂದು ತೆರೆಗೆ ಬರಬೇಕಿತ್ತು. ಸೆನ್ಸಾರ್‌ ಪ್ರಕ್ರಿಯೆ ತಡವಾಗುತ್ತಿರುವ ಹಿನ್ನೆಲೆ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿದೆ ಎನ್ನಲಾಗಿದೆ. ಅಭಿಷೇಕ್‌ ಇತ್ತೀಚೆಗಷ್ಟೇ ವಿವಾಹವಾಗಿದ್ದಾರೆ. ಮದುವೆ ತಯಾರಿಯಲ್ಲಿದ್ದ ಅವರು ಸಿನಿಮಾ ಪ್ರಚಾರದಲ್ಲಿ ಹೆಚ್ಚಾಗಿ ತೊಡಗಿಕೊಂಡಿರಲಿಲ್ಲ. ಈ ಕಾರಣದಿಂದಲೂ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಸೆನ್ಸಾರ್‌ ಮಂಡಳಿಯಿಂದ ಸಿನಿಮಾ ಪ್ರದರ್ಶನಕ್ಕೆ ಅನುಮತಿ ದೊರೆತ ನಂತರ ಹೊಸ ದಿನಾಂಕವನ್ನು ಘೋಷಿಸುವುದಾಗಿ ಚಿತ್ರತಂಡ ಹೇಳಿಕೊಂಡಿದೆ.

ʼಕ್ರೈಂʼ ಮತ್ತು ಆ್ಯಕ್ಷನ್‌ ಕಥಾಹಂದರವನ್ನು ಹೊಂದಿರುವ ʼಬ್ಯಾಡ್‌ ಮ್ಯಾನರ್ಸ್‌ʼ ಚಿತ್ರದಲ್ಲಿ ಅಭಿಷೇಕ್‌ ಪೊಲೀಸ್‌ ಅಧಿಕಾರಿಯ ಪಾತ್ರದಲ್ಲಿ ಮಿಂಚಿದ್ದಾರೆ. ಖ್ಯಾತ ನಟಿ ರಚಿತಾ ರಾಮ್‌ ಅಭಿಷೇಕ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದು, ದತ್ತಣ್ಣ, ತಾರಾ, ಶರತ್‌ ಲೋಹಿತಾಶ್ವ, ಕುರಿ ಪ್ರತಾಪ್‌, ಮಿತ್ರ, ಮೋಹನ್‌ ಜುನೇಜಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜನರ ಭಾವನೆಗಳಿಗೆ ಧಕ್ಕೆ; ‘ಆದಿಪುರುಷ್’ ಚಿತ್ರದ ವಿರುದ್ಧ ಕಾಂಗ್ರೆಸ್, ಎಎಪಿ, ಶಿವಸೇನೆ ಆಕ್ರೋಶ

ಟೀಸರ್‌ ಮತ್ತು ಟ್ರೈಲರ್‌ಗಳ ಮೂಲಕ ಸದ್ದು ಮಾಡಿದ್ದ ಈ ಸಿನಿಮಾಗೆ ಕೆಂ ಸುಧೀರ್‌ ಬಂಡವಾಳ ಹೂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಚರಣ್‌ ರಾಜ್‌ ಸಂಗೀತ ಸಂಯೋಜನೆ ಮಾಡಿದ್ದಾರೆ. ʼಬ್ಯಾಡ್‌ ಮ್ಯಾನರ್ಸ್‌ʼ ಜುಲೈನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...