ಮಂಡ್ಯ | ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ರೋಹಿತ್​ಗೆ ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

Date:

‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್​ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.  ಭೀಕರ ಅಪಘಾತದಲ್ಲಿ ರೋಹಿತ್ ಮತ್ತು ಅವರ ತಾಯಿ ಇಬ್ಬರಿಗೂ ಗಾಯಗಳಾಗಿವೆ. ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಮಾಸ್ಟರ್ ರೋಹಿತ್, ಶ್ರೀರಂಗಪಟ್ಟಣದಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಮಾಸ್ಟರ್ ರೋಹಿತ್, ಅವರ ತಾಯಿ, ಒಬ್ಬ ಉಪನ್ಯಾಸಕ ಹಾಗೂ ರೋಹಿತ್​ರ ಗೆಳೆಯರು KA11 N 4173 ಸಂಖ್ಯೆಯ ಕಾರಿನಲ್ಲಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆಯಲ್ಲಿ ಕೇರಳದ ಪ್ರವಾಸಿ ಬಸ್ಸೊಂದಕ್ಕೆ ಕಾರು ಡಿಕ್ಕಿ ಆಗಿದ್ದು, ಕಾರಿನಲ್ಲಿದ್ದ ಎಲ್ಲರಿಗೂ ತೀವ್ರ ಗಾಯಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕದಲ್ಲಿ ಟ್ರಂಪ್ ಆಡಳಿತ; ಜಾಗರೂಕವಾಗಿರಬೇಕಿದೆ ಭಾರತ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್​ಗೆ ವಸಡು, ತಲೆ ಬುರುಡೆ ಸೇರಿದಂತೆ ಹಲವು ಕಡೆ ತೀವ್ರ ಪೆಟ್ಟಾಗಿದೆ. ಅವರನ್ನು ಮೈಸೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್​ರ ತಾಯಿಯ ಎರಡೂ ಕಾಲಿಗೆ ತೀವ್ರ ಪೆಟ್ಟಾಗಿದ್ದು ಮೂಳೆಗಳು ಮುರಿದಿವೆ ಎನ್ನಲಾಗುತ್ತಿದೆ. ರೋಹಿತ್​ರ ಗೆಳೆಯ ಹಾಗೂ ಉಪನ್ಯಾಸಕರಿಗೂ ತೀವ್ರ ಪೆಟ್ಟಾಗಿದೆ.

ಮಾಸ್ಟರ್ ರೋಹಿತ್, ‘ಒಂದಲ್ಲ ಎರಡಲ್ಲ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಅದೇ ಸಿನಿಮಾಕ್ಕೆ ಅವರಿಗೆ ರಾಷ್ಟ್ರಪ್ರಶಸ್ತಿ ಸಹ ದೊರಕಿತ್ತು. ಕಳೆದ ವರ್ಷ ಬಿಡುಗಡೆ ಆದ ‘ಕಾಟೇರ’ ಸಿನಿಮಾದಲ್ಲಿ ರೋಹಿತ್ ನಟಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...