ಕೇರಳ | ಟ್ರಕ್‌ಗೆ ಕಾರು ಡಿಕ್ಕಿ; ಮಲಯಾಳಂ ನಟನಿಗೆ ಗಾಯ

Date:

ಮಲಯಾಳಂ ನಟ ಬಿಜು ಕುಟ್ಟನ್‌ ಅವರು ಇಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಕನ್ನಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಬಿಜು ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ(AMMA)ದ ಚುನಾವಣೆಯಲ್ಲಿ ಮತದಾನ ಮಾಡಲು ಕೊಚ್ಚಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಉಂಟಾಗಿದೆ.

ಅತೀ ವೇಗವಾಗಿ ಚಲಿಸುತ್ತಿದ್ದ ಬಿಜು ಅವರ ಕಾರು ನಿಯಂತ್ರಣ ತಪ್ಪಿ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಂಟೈನರ್‌ ಟ್ರಕ್‌ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ನಟ ಬಿಜು ಕುಟ್ಟನ್‌ ಮತ್ತು ಕಾರಿನ ಚಾಲಕ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ

ನಟ ಬಿಜು ಕುಟ್ಟನ್‌(49ವರ್ಷ) ಅವರ ಕೈಗೆ ಗಾಯವಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವುದಾಗಿ ಮೂಲಗಳು ತಿಳಿಸಿವೆ. ಘಟನೆಯ ನಂತರ ಪಾಲಕ್ಕಾಡ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಬಿಜು ಕುಟ್ಟನ್‌ ಎರ್ನಾಕುಲಂಗೆ ವಾಪಸ್‌ ಆಗಿರುವುದಾಗಿ ವರದಿ ತಿಳಿಸಿದೆ.

ಬಿಜು ಕುಟ್ಟನ್‌ ಮಲಯಾಳಂನ ಜನಪ್ರಿಯ ಹಾಸ್ಯ ನಟರಾಗಿದ್ದು, ಈವರೆಗೆ ಅವರು ಸುಮಾರು 70ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...