ಸುದೀಪ್‌ ಮೂರು ತಾಸಿನ ನಾಯಕ ಎಂದ ಸತೀಶ್‌ ಜಾರಕಿಹೊಳಿಗೆ ನಟ ಚೇತನ್‌ ಪ್ರಶ್ನೆ

Date:

ಪ್ರಚಾರದ ವೇಳೆ ಸುದೀಪ್‌ ಬಗ್ಗೆ ಮಾತನಾಡಿದ್ದ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪರ ಪ್ರಚಾರಕ್ಕಳಿದವರು ಎಷ್ಟು ತಾಸಿನ ನಾಯಕರು ಎಂದ ಚೇತನ್‌

ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ನಟ ಕಿಚ್ಚ ಸುದೀಪ್‌ ಕೇವಲ ಮೂರು ತಾಸಿನ ನಾಯಕನಷ್ಟೇ ಎಂಬ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತೀಶ್‌ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್‌ ಮಾಡಿರುವ ಚೇತನ್‌ ಕುಮಾರ್‌, “ಸುದೀಪ್ ಅವರನ್ನು ‘3 ತಾಸಿನ ನಾಯಕನಷ್ಟೇ’ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಾರಕಿಹೊಳಿ ಅವರೇ ನಿಮ್ಮ ಪ್ರಕಾರ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುವ ಫಿಲ್ಮ್ ನಟರು ಎಷ್ಟು ತಾಸಿನ ನಾಯಕರು” ಎಂದು ಪ್ರಶ್ನೆ ಹಾಕಿದ್ದಾರೆ.

ಸೋಮವಾರ ಗುಂಡ್ಲುಪೇಟೆ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಸತೀಶ್‌ ಜಾರಕಿಹೊಳಿ, “ಮೊನ್ನೆ ಸುದೀಪ್‌ ಕೂಡ ಇಲ್ಲಿ ಪ್ರಚಾರಕ್ಕೆ ಬಂದಿದ್ದರು. ನಾವೆಲ್ಲ ದುಡ್ಡು ಕೊಟ್ಟು ಟಿಕೆಟ್‌ ಖರೀದಿ ಮಾಡಿ ಸುದೀಪ್‌ ಅವರನ್ನು ನೋಡಬೇಕಿತ್ತು. ಆದರೆ, ಈಗ ಪುಕ್ಕಟ್ಟೆಯಾಗಿ ಬಂದು ಹೋಗಿದ್ದಾರೆ. ಅವರು ಅಳಲಿಕ್ಕೆ ದುಡ್ಡು ತೆಗೆದುಕೊಳ್ತಾರೆ. ನಗಲಿಕ್ಕೂ ದುಡ್ಡು ತೆಗೆದುಕೊಳ್ತಾರೆ. ಹೀಗಿರುವಾಗ ಅವರು ನಮ್ಮ (ಜನರ) ಕಷ್ಟಗಳನ್ನು ಯಾವಾಗ ನೋಡಲು ಸಾಧ್ಯ. ಅಂಥವರು ಕೇವಲ ಮೂರು ತಾಸಿನ ನಾಯಕರು ಮಾತ್ರ. ನಾವು ನಿರಂತರವಾಗಿ ನಿಮ್ಮ ಸೇವೆ ಮಾಡುವವರು. ಸುಮ್ಮನೆ ಯಾವುದೋ ಒಬ್ಬ ನಟ ಬಂದ ಕಣ್ಣೀರು ಹಾಕಿ ಹೋದರೆ ಅದು ಪರಿಹಾರ ಅಲ್ಲ” ಎಂದು ತಮ್ಮ ಪಕ್ಷದ ಪರ ಅಭ್ಯರ್ಥಿಗೆ ಮತ ಹಾಕುವಂತೆ ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

ಸತೀಶ್‌ ಜಾರಕಿಹೊಳಿ ಅವರು ಸುದೀಪ್‌ ಬಗ್ಗೆ ಮಾತನಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...