ನಟ ದರ್ಶನ್ ಪ್ರಕರಣ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Date:

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್‌ನ ಕ್ರಮವನ್ನು ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಎಲ್ಲ ಜಾಮೀನು ಅರ್ಜಿಗಳಿಗೂ ಹೈಕೋರ್ಟ್ ಒಂದೇ ರೀತಿಯ ಆದೇಶ ನೀಡುತ್ತದೆಯೇ?” ಎಂದು ಪ್ರಶ್ನಿಸಿದ ಪೀಠ, “ಈ ರೀತಿಯ ಪ್ರಕರಣದಲ್ಲಿ ಜಾಮೀನು ನೀಡಿರುವ ಕ್ರಮದಿಂದ ನಮಗೆ ತೊಂದರೆಯಾಗುತ್ತಿದೆ. ಹೈಕೋರ್ಟ್ ನ್ಯಾಯಾಧೀಶರಿಂದ ಈ ರೀತಿಯ ತಪ್ಪನ್ನು ನಿರೀಕ್ಷಿಸಿರಲಿಲ್ಲ. ಸೆಷನ್ಸ್ ನ್ಯಾಯಾಲಯದಿಂದ ಈ ತಪ್ಪಾಗಿದ್ದರೆ ಸುಮ್ಮನಿರಬಹುದಿತ್ತು. ಹೈಕೋರ್ಟ್ ನ್ಯಾಯಾಧೀಶರು ಈ ರೀತಿಯ ತಪ್ಪು ಮಾಡುತ್ತಾರೆಯೇ?” ಎಂದು ವಿಷಾದ ವ್ಯಕ್ತಪಡಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೀಠವು, ಈ ಮಾದರಿಯ ತೀರ್ಪು ನೀಡುವ ಮೊದಲು ಹೈಕೋರ್ಟ್ ತನಿಖಾ ಅಂಶಗಳನ್ನು ಸಮರ್ಪಕವಾಗಿ ಪರಿಗಣಿಸಿದೆಯೇ ಎಂಬುದರ ಕುರಿತು ಅನುಮಾನ ವ್ಯಕ್ತಪಡಿಸಿದೆ. “ಇದು ಕೊಲೆ ಮತ್ತು ಪಿತೂರಿ ಪ್ರಕರಣವಾಗಿರುವುದರಿಂದ ನಾವು ಹೆಚ್ಚು ಗಂಭೀರವಾಗಿ ವಿಚಾರಿಸುತ್ತೇವೆ,” ಎಂದು ಸ್ಪಷ್ಟಪಡಿಸಿತು.

ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, “ನಾವು ಖುಲಾಸೆ ಅಥವಾ ಶಿಕ್ಷೆಯ ತೀರ್ಪು ನೀಡುವುದಿಲ್ಲ. ಆದರೆ ಹೈಕೋರ್ಟ್‌ನ ನ್ಯಾಯಾಂಗ ಕ್ರಮವನ್ನು ಪರಿಶೀಲಿಸಿ ಅಂತಿಮ ತೀರ್ಮಾನಕ್ಕೆ ಬರುವೆವು” ಎಂದು ಹೇಳಿ ವಿಚಾರಣೆಯನ್ನು ಪೀಠ ಮುಕ್ತಾಯಗೊಳಿಸಿತು.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂಥ್ರಾ ವಾದ ಮಂಡಿಸಿ ಪ್ರಕರಣದ ಬಗ್ಗೆ ಕೋರ್ಟ್‌ಗೆ ವಿವರಣೆ ನೀಡಿದ್ದಾರೆ. ಸರ್ಕಾರ ಸಲ್ಲಿಸಿರುವ ದಾಖಲೆಯನ್ನು ಕೋರ್ಟ್‌ ಪರಿಶೀಲಿಸಿ, 17 ಜನರಲ್ಲಿ 7 ಜನರ ಜಾಮೀನು ಅರ್ಜಿ ರದ್ದಾಗಬೇಕೆಂದು ಬಯಸಿದ್ದೀರಾ ಎಂದು ಕೋರ್ಟ್‌ ಪ್ರಶ್ನೆ ಕೇಳಿತು. ಇದಕ್ಕೆ ಉತ್ತರಿಸಿದ ಸಿದ್ದಾರ್ಥ್‌ ಲೂಥ್ರಾ ಅವರು 7 ಜನರ ಜಾಮೀನು ರದ್ದಾದ ಬಳಿಕ ಉಳಿದವರ ಜಾಮೀನು ರದ್ದು ಮಾಡಲು ಅರ್ಜಿ ಸಲ್ಲಿಸುತ್ತೇವೆ ಎಂದರು.

ಇದನ್ನು ಉತ್ತರಿಸಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!

ಸಾಂದರ್ಭಿಕ ಸಾಕ್ಷಿಯ ಮೇಲೆ ಕೇಸ್‌ ದಾಖಲಾಯಿತಾ? ಎಂದು ಕೋರ್ಟ್‌ ಪ್ರಶ್ನೆ ಕೇಳಿದ್ದು, ಇದಕ್ಕೆ ಉತ್ತರಿಸಿದ ಸಿದ್ದಾರ್ಥ್‌ ಅವರು ಪ್ರತ್ಯಕ್ಷದರ್ಶಿಗಳು ಕೂಡ ಇದ್ದಾರೆ ಎಂದಿದ್ದಾರೆ.

ಕೆಲ ತಿಂಗಳ ಹಿಂದೆ ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ. ಅಲ್ಲದೆ, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಬಗ್ಗೆ ಅಸಮಾಧಾನ ಹೊರಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...