ದರ್ಶನ್, ಸಹಚರರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ; ನಟನಿಗೆ ಇನ್ನಷ್ಟು ಸಂಕಷ್ಟ

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನರಾಗಿರುವ ನಟ ದರ್ಶನ್ ಹಾಗೂ ಇತರರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ.

ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನಗಳ ವಿಸ್ತರಣೆ ಮಾಡಿ ನ್ಯಾಯಾಧೀಶ ವಿಶ್ವನಾಥ ಸಿ ಗೌಡರ್ ಅವರು ಗುರುವಾರ(ಜು.18ರಂದು) ಆದೇಶ ನೀಡಿದ್ದಾರೆ.

ಆ ಮೂಲಕ ದರ್ಶನ್ ಮತ್ತು ಸಹಚರರು ಆಗಸ್ಟ್ 1ರವರೆಗೆ ಮತ್ತೆ ಜೈಲಿನಲ್ಲಿ ದಿನ ಕಳೆಯಲಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಗುರುವಾರ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ದರ್ಶನ್ ಅವರಿಗೆ ಜೈಲೂಟ ಸೇವಿಸಿ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ತಮಗೆ ಮನೆಯೂಟ ಬೇಕು. ಮಲಗಲು ಹಾಸಿಗೆ ಬೇಕು, ಓದಲು ಪುಸ್ತಕಗಳನ್ನು ನೀಡಬೇಕೆಂದು ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ತಂಗಲಾನ್ ಟ್ರೈಲರ್ ಬಿಡುಗಡೆ: ಆಗಸ್ಟ್‌ 15ರಿಂದ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದೆ ಕೋಲಾರದ ಕಥೆ ‘ತಂಗಲಾನ್’

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಶುಕ್ರವಾರ (ಜು.19ಕ್ಕೆ) ಅಂದರೆ ನಾಳೆಗೆ ಮುಂದೂಡಿದೆ.

ಸದ್ಯಕ್ಕೆ ಜಾಮೀನು ಕಷ್ಟ, ನಟನಿಗೆ ಇನ್ನಷ್ಟು ಸಂಕಷ್ಟ

ಇತ್ತೀಚೆಗೆ ದರ್ಶನ್ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ , ಸಹೋದರ ದಿನಕರ್ ಅವರು ಭೇಟಿ ಆಗಿದ್ದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ದರ್ಶನ್ ಜತೆ ಮಾತನಾಡಿದ ಪತ್ನಿ ಮತ್ತು ಸಹೋದರ ಜಾಮೀನು ವಿಚಾರ ಚರ್ಚಿಸಿದ್ದರು. ಈ ವೇಳೆ ಸದ್ಯಕ್ಕೆ ಜಾಮೀನು ಸಿಗುವುದು ಕಷ್ಟ. ಸ್ವಲ್ಪ ದಿನಗಳ ಕಾಲ ಸಮಾಧಾನದಿಂದ ಇರುವಂತೆ ದರ್ಶನ್ಗೆ ಸಲಹೆ ನೀಡಿದ್ದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರು ಜೈಲು ಸೇರಿ 25 ದಿನಗಳೇ ಕಳೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಇದು ಆರೋಪಿಗಳಿಗೆ ಮತ್ತಷ್ಟು ಸಂಕಷ್ಟ ತಂದಿಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...