ನಟ ದರ್ಶನ್‌ಗೆ ‘ಲಕ್ವ’ ಹೊಡೆಯುವ ಸಾಧ್ಯತೆ; ಆತಂಕ ವ್ಯಕ್ತಪಡಿಸಿದ ವಕೀಲ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿರುವ ನಟ ದರ್ಶನ್ – ಬೆನ್ನುಹುರಿ, ರಕ್ತ ಸಂಚಾರದಲ್ಲಿ ಸಮಸ್ಯೆ, ಕೀಲು ನೋವು ಸಮಸ್ಯೆ ಹಾಗೂ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ ಮಾಡಿಸದಿದ್ರೆ, ಅವರು ಲಕ್ವ (ಪಾರ್ಶ್ವವಾಯು)ಗೆ ತುತ್ತಾಗುವ ಅಪಾಯವಿದೆ ಎಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುವುದಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೀಗ, ಆರೋಗ್ಯ ಸಮಸ್ಯೆ ಕಾರಣಕ್ಕಾಗಿ ಅವರಿಗೆ ಜಾಮೀನುನ ನೀಡಬೇಕೆಂದು ದರ್ಶನ್ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದಾರೆ.

ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ. ವಿಚಾರಣೆ ವೇಳೆ ವಾದ ಮಂಡಿಸಿದ ದರ್ಶನ್ ಪರ ವಕೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದರ್ಶನ್‌ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, “ದರ್ಶನ್‌ ತೀವ್ರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸುವ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಗಲು ದರ್ಶನ್‌ಗೆ ಜಾಮೀನು ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಪ್ರತಿವಾದ ಮಂಡಿಸಿದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಪಿ.ಪ್ರಸನ್ನ ಕುಮಾರ್, “ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿದ್ದಾರೆ. ಹೀಗಾಗಿ, ಆ ವರದಿಯಲ್ಲಿ ಏನಿದೆ ಎಂಬುದು ನಮಗೆ ಗೊತ್ತಿಲ್ಲ. ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಹೀಗಾಗಿ, ನಾವು ವರದಿ ಪರಿಶೀಲಿಸಲು ಸಮಯಬೇಕು” ಎಂದರು.

ಅವರ ವಾದವನ್ನು ಆಲಿಸಿದ ನ್ಯಾಯಾಲಯ, ವರದಿಯನ್ನು ಪರಿಶೀಲಿಸಿ, ಉತ್ತರ ನೀಡುವಂತೆ ಪ್ರಸನ್ನ ಕುಮಾರ್‌ ಅವರಿಗೆ ಸೂಚಿಸಿದ್ದು, ವಿಚಾರಣೆಯನ್ನು ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...