ಶೀಘ್ರದಲ್ಲೇ ಹಸೆಮಣೆ ಏರಲಿರುವ ನಟ ಡಾಲಿ ಧನಂಜಯ್‌

Date:

ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್‌ ಅವರು ಧನ್ಯತಾ ಎಂಬ ವೈದ್ಯೆಯನ್ನು ವಿವಾಹವಾಗುತ್ತಿದ್ದಾರೆ. ಫೆಬ್ರುವರಿ 16 ರಂದು ಮೈಸೂರಿನಲ್ಲಿ ಅದ್ಧೂರಿ ಮದುವೆ ನಡೆಯಲಿದೆ. ಧನ್ಯತಾ ಅವರು ಚಿತ್ರದುರ್ಗ ಮೂಲದವರು ಮತ್ತು ಮೈಸೂರಿನಲ್ಲಿ ವ್ಯಾಸಂಗ ಮಾಡಿದ್ದಾರೆ.

ಸ್ತ್ರೀರೋಗ ತಜ್ಞೆ ಆಗಿರುವ ಧನ್ಯತಾ, ಧನಂಜಯ್​ಗೆ ಜೊತೆಯಾಗುತ್ತಿದ್ದಾರೆ. ಡಾಲಿ ಮತ್ತು ಧನ್ಯತಾ ಮಧ್ಯೆ ಅನೇಕ ವರ್ಷಗಳ ಪರಿಚಯ ಇದೆ. ಈ ಪರಿಚಯ ಪ್ರೀತಿಗೆ ತಿರುಗಿ ಇದೀಗ ಹಸೆಮಣೆ ಏರುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇರಳದ ಹೇಮಾ ಸಮಿತಿ ಮೂಲಕ ದಾಖಲಾಗಿದ್ದ ಪ್ರಕರಣ ಬೆಂಗಳೂರಿಗೆ ವರ್ಗಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಸೀಕೆರೆ ಮೂಲದ ನಟ ಧನಂಜಯ ಓದಿದ್ದು ಕೂಡ ಮೈಸೂರಿನಲ್ಲಿ. ಸದ್ಯ ಶೇರ್ ಮಾಡಿರುವ ವಿಡಿಯೋದಲ್ಲಿ ಡಾಲಿ ಧನಂಜಯ ಅವರು ಕವನ ಹೇಳುತ್ತಾ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ. ಅದ್ದೂರಿಯಾಗಿ ನಡೆಯುವ ಮದುವೆ ಸಮಾರಂಭದಲ್ಲಿ ಸಿನಿಮಾರಂಗದವರು, ರಾಜಕೀಯ ಕ್ಷೇತ್ರದವರು ಸೇರಿ ಅನೇಕ ಗಣ್ಯರು ಹಾಜರಾಗಲಿದ್ದಾರೆ. ಬೆಳಿಗ್ಗೆ ವಿವಾಹ ನಡೆಯಲಿದ್ದು, ಅದೇ ದಿನ ಅದೇ ವೇದಿಕೆ ಮೇಲೆ ಆರತಕ್ಷತೆ ಸಮಾರಂಭ ಕೂಡ ಜರುಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...