2 ಲೋಕಸಭೆ ಸೀಟಿನ ಮಣಿಪುರದಲ್ಲಿ ನೂರು ಓಟು ಸತ್ತು ಹೋಯ್ತು: ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ

Date:

ದಕ್ಷಿಣ ಭಾರತದ ಭಾಷೆಯ ಸಿನಿಮಾಗಳಲ್ಲಿ ಪ್ರತಿಭಾನ್ವಿತನಾಗಿರುವ ಕನ್ನಡಿಗ ನಟ ಕಿಶೋರ್. ಚಿತ್ರರಂಗ ಮಾತ್ರವಲ್ಲದೆ ಸಮಾಜದ ಅವ್ಯವಸ್ಥೆಯ ವಿರುದ್ಧವೂ ಆಗಾಗ ಸಿಡಿದೆದ್ದು ಪ್ರತಿರೋಧ ತೋರಿಸುತ್ತಲೆ ಇರುತ್ತಾರೆ. ಅವರು ಸಾಮಾಜಿಕ ಮಾಧ್ಯಮಗಳಲ್ಲೂ ಸಕ್ರಿಯ.

ಪ್ರಸಕ್ತ ರಾಜಕೀಯ ಹಾಗೂ ಸಾಮಾಜಿಕ ವಿದ್ಯಮಾನಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಾಗೂ ಬಹಿರಂಗವಾಗಿ ದಾಖಲಿಸುತಿರುತ್ತಾರೆ. ಕೇಂದ್ರ ಸರ್ಕಾರದ ಭ್ರಷ್ಟ ಆಡಳಿತದ ವಿರುದ್ಧ ಹೆಚ್ಚು ಟೀಕಿಸುವ ಕಾರಣದಿಂದಲೇ ಕೆಲವು ತಿಂಗಳ ಹಿಂದೆ ಅವರ ಟ್ವಿಟರ್‌ ಅಕೌಂಟ್‌ಅನ್ನು ಅಮಾನತುಗೊಳಿಸಲಾಗಿತ್ತು. ಆದರೂ ಕಿಶೋರ್ ಅವರು ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಧ್ವನಿಯೆತ್ತುವುದನ್ನು ನಿಲ್ಲಿಸಿರಲಿಲ್ಲ.  

ಇದೀಗ ಕಿಶೋರ್ ಅವರು ಮಣಿಪುರ ಹಿಂಸಾಚಾರದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಕಟುವಾಗಿ ಟೀಕಿಸಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇದು ಸ್ಟೇಷನ್‌ ಮಾಸ್ಟರ್‌ ಮಾಡುವ ಕೆಲಸ; ಪ್ರಧಾನಿಯ ವಂದೇ ಭಾರತ್ ಉದ್ಘಾಟನೆ ಛೇಡಿಸಿದ ಪ್ರಕಾಶ್‌ ರೈ

”ಮನ್ ಕೀ ಬಾತ್ ನಲ್ಲಿ ಕಳೆದುಹೋದ ಮಣಿಪುರದ ಬಾತ್. ದೇಶದಲ್ಲಿ ಎಲ್ಲೇ ಅಶಾಂತಿ ಮೂಡಿದಾಗಲೂ ಒಬ್ಬ ಪ್ರಧಾನಿ ಮಾಡಬಹುದಾದ ಮೂಲಭೂತ, ಅತೀ ಸರಳ, ಕಾಮನ್ ಸೆನ್ಸ್‌​ನ ಕೆಲಸ ಶಾಂತಿಯ ಕರೆ ಕೊಡುವುದು. ಅದನ್ನೂ ಕೂಡ ಮಾಡದ ಪ್ರಧಾನಿಯ ಮನಸ್ಥಿತಿಯೇನು? ನೂರ ನಲವತ್ತು ಕೋಟಿ ಓಟಿನ ದೇಶದಲ್ಲಿ ಕೇವಲ 2 ಲೋಕಸಭೆ ಸೀಟಿನ ಮಣಿಪುರದಲ್ಲಿ ಸತ್ತುಹೋದ ನೂರು ಓಟು, ಮನೆ ಕಳೆದುಕೊಂಡ 50 ಸಾವಿರ ಓಟುಗಳು, ಈ ಪ್ರಚಾರದಾಹಿ ಅಧಿಕಾರದಾಹಿ ಪ್ರಧಾನಿಗೆ ಯಾವ ಲೆಕ್ಕವೆಂಬುದೇ? 2002 ರಲ್ಲಿ ಗುಜರಾತ್, 2023 ರಲ್ಲಿ ಮಣಿಪುರ .. ಜೀವಗಳು ಮುಖ್ಯವಲ್ಲ ಓಟುಗಳಷ್ಟೇ ಮುಖ್ಯ. ಇತಿಹಾಸಕ್ಕೆ ಮರೆವಿಲ್ಲ ನೆನಪಿರಲಿ” ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಮಣಿಪುರ ಹಿಂಸಾಚಾರದ ಬಗ್ಗೆ ಬರೆದುಕೊಂಡಿದ್ದ ಕಿಶೋರ್, ”ಒಂದು ಕರೆಯಲ್ಲಿ ಉಕ್ರೇನ್ ಯುದ್ಧ ನಿಲ್ಲಿಸಿದವೆಂದು ಬಡಾಯಿ ಕೊಚ್ಚುವ ಜನ, ಮಣಿಪುರವನ್ನು ತಿಂಗಳಿಂದ ಹೊತ್ತಿ ಉರಿಯಲು ಬಿಟ್ಟದ್ದೇಕೆ. ಲಾಭ ಲಾಭ ಲಾಭ, ಎಲ್ಲದರಲ್ಲೂ ಲಾಭ. ಪಾಪದ ಜನರ ಸಾವಿನಲ್ಲೂ ಲಾಭದ ಧಂದೆ ಮಾಡುವ ವ್ಯಾಪಾರಿಯ ಕೈಗೆ ದೇಶ ಕೊಟ್ಟಂತಾಯ್ತು. ಜನ ಸಾಯುತ್ತಲೇ ಇರಲಿ ಗುಜರಾತಿನಲ್ಲೊ, ಪುಲ್ವಾಮದಲ್ಲೊ, ಒಡಿಶಾದಲ್ಲೊ, ಮಣಿಪುರದಲ್ಲೊ, ದೇಶದ ಮೂಲೆ ಮೂಲೆಯಲ್ಲಿ ಹಿಂಸೆಯ ರೋಗವನ್ನು ಹರಡಿ ಲಾಭ ಹೆಕ್ಕುತ್ತಲೇ ಇರುತ್ತಾರೆ ದ್ವೇಷದ ವ್ಯಾಪಾರಿಗಳು, ಯಾರೂ ಪ್ರಶ್ನಿಸಬೇಡಿ .. ಪತ್ರಿಕೆಯಾದರೂ ಸರಿ ಟ್ವಿಟರ್‌ನಲ್ಲಾದರೂ ಸರಿ, ತುಮ್ ಬಸ್ ಚುಪ್ ರಹೋ ಯೇ ಉನ್ ಕೀ ಮನ್ ಕೀ ಬಾತ್ ಹೈ” ಎಂದು ಮಾಧ್ಯಮಗಳ ವಿರುದ್ಧವು ಆಕ್ರೋಶ ಹೊರ ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...