ನಟ ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

Date:

ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ನಟ ಶಿವರಾಜ್‌ಕುಮಾರ್‌ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿಕೊಂಡಿದ್ದಾರೆ.

ಈ ಹಿಂದೆ ಮನು ವಿರುದ್ಧ ಪ್ರಕರಣ ದಾಖಲಾದಾಗ ಆಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಆಡಿಯೋ ಕೂಡ ನನ್ನದೇ ಎಂದು ಮಡೆನೂರು ಮನು ಒಪ್ಪಿಕೊಂಡಿದ್ದರು. ಜೊತೆಗೆ ಆ ರೀತಿ ಮಾತನಾಡುವಂತೆ ಪ್ರಚೋದನೆ ಮಾಡಿದ್ದರು. ನಾನಾಗಿಯೇ ಆ ರೀತಿ ಮಾತನಾಡಿದ್ದಲ್ಲ ಎಂದು ಮಡೆನೂರು ಮನು ಜೈಲಿನಿಂದ ಆಚೆ ಬಂದ ಬಳಿಕ ಹೇಳಿಕೊಂಡಿದ್ದರು.

ಜೈಲಿನಿಂದ ಆಚೆ ಬಂದ ಬಳಿಕ ನಟ ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅವರನ್ನ ನೇರವಾಗಿ ಭೇಟಿ ಮಾಡಿ ಕ್ಷಮೆ ಕೇಳಲು ಪ್ರಯತ್ನ ಪಟ್ಟಿದ್ದರು. ಅದು ಸಾಧ್ಯವಾಗಿರಲಿಲ್ಲ. ಇದೀಗ ನಟ ಶಿವರಾಜ್‌ ಕುಮಾರ್ ಅವರನ್ನ ನೇರವಾಗಿ ಭೇಟಿ ಮಾಡಿ, ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ನಟ ಮಡೆನೂರು ಮನು. ಅಲ್ಲದೇ ತಮ್ಮ ʻಕುಲದಲ್ಲಿ ಕೀಳ್ಯಾವುದೋʼ ಸಿನಿಮಾವನ್ನ ಮತ್ತೆ ಬಿಡುಗಡೆ ಮಾಡುವುದಕ್ಕೆ ಕೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

ನಟ ಶಿವರಾಜ್‌ಕುಮಾರ್, ನಟ ಮಡೆನೂರು ಮನುಗೆ ಒಳ್ಳೆಯದಾಗಲಿ, `ಒಳ್ಳೆಯ ಟೈಟಲ್‌ನ ಸಿನಿಮಾ ರಿಲೀಸ್ ಮಾಡಿ. ಕುಲದಲ್ಲಿ ಯಾರೂ ಕೀಳಲ್ಲ, ಮೇಲಲ್ಲ. ಯಾರೇ ಬೈದರೂ, ಹೊಗಳಿದರೂ ಅದಕ್ಕೆ ನಾನು ತಲೆ ಕೆಡಿಸಿಕೊಳ್ಳಲ್ಲ’ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.

ಇನ್ನು ಜೈಲಿನಿಂದ ಹೊರ ಬಂದ ಬಳಿಕ ನಟ ಮಡೆನೂರು ಮನು ಫಿಲ್ಮ್ ಚೇಂಬರ್‌ಗೂ ಭೇಟಿ ನೀಡಿ ತಮ್ಮ ಮೇಲೆ ಹೇರಿದ್ದ ನಿಷೇಧ ತೆರುವುಗೊಳಿಸಿ ಸಿನಿಮಾ ಹಾಗೂ ಕಿರುತೆರೆಯಲ್ಲಿ ನಟಿಸಲು ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದರು. ಇದೀಗ ಹೊಸ ಸಿನಿಮಾಗಾಗಿ ಬೇಡಿ ತೊಟ್ಟು ಫೋಟೋಶೂಟ್ ಮಾಡಿಸಿದ್ದಾರೆ. ತಮ್ಮ 2ನೇ ಸಿನಿಮಾಗಾಗಿ ಫೋಟೋಶೂಟ್ ಮಾಡಿಸಿರುವ ಮನು ಸದ್ಯದಲ್ಲಿಯೇ ಶೂಟಿಂಗ್ ಕೂಡ ಮಾಡಲು ತಯಾರಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...