ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಶಿವರಾಜ್‌ ಕುಮಾರ್‌ ದಂಪತಿ

Date:

  • ಸ್ನೇಹಪೂರ್ವಕ ಭೇಟಿ ಎಂದ ಸಿಎಂ ಸಿದ್ದರಾಮಯ್ಯ
  • ಶಿವಣ್ಣ ಭೇಟಿಯ ಹಿಂದಿದೆ ರಾಜಕೀಯ ಲೆಕ್ಕಾಚಾರ

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜ್‌ ಕುಮಾರ್‌ ಸೋಮವಾರ ಬೆಳಗ್ಗೆ ತಮ್ಮ ಪತ್ನಿ ಗೀತಾ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ದಂಪತಿ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಸ್ನೇಹಪೂರ್ವಕ ಭೇಟಿ ಎನ್ನಿಸಿದರೂ ಇದರ ಹಿಂದೆ ರಾಜಕೀಯ ಲೆಕ್ಕಾಚಾರಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಗೀತಾ ಶಿವರಾಜ್‌ಕುಮಾರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದಾದ ಬೆನ್ನಲ್ಲೇ ಸಿದ್ದರಾಮಯ್ಯ, ಜಗದೀಶ್‌ ಶೆಟ್ಟರ್‌ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರ ಪರವಾಗಿ ಶಿವಣ್ಣ ಚುನಾವಣಾ ಪ್ರಚಾರ ನಡೆಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ತಮ್ಮ ಸಂಬಂಧಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಿವಣ್ಣ ಪಟ್ಟು ಹಿಡಿದಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಮಧು ಅವರಿಗೆ ಮಂತ್ರಿಗಿರಿ ಕೂಡ ಒಲಿದಿತ್ತು.

ವಿಧಾನಸಭಾ ಚುನಾವಣೆಯ ಬಳಿಕ ಇದೀಗ ಎಲ್ಲರ ಚಿತ್ತ 2024ರ ಲೋಕಸಭಾ ಚುನಾವಣೆಯತ್ತ ನೆಟ್ಟಿದೆ. ಇದೇ ಕಾರಣಕ್ಕೆ ಶಿವಣ್ಣ ಮತ್ತು ಗೀತಾ ಅವರು ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಸಿದ್ದರಾಮಯ್ಯನವರು ಮಾತ್ರ, ಶಿವಣ್ಣ ದಂಪತಿ ನನ್ನನ್ನು ಅಭಿನಂದಿಸುವ ಸಲುವಾಗಿ ಮನೆಗೆ ಭೇಟಿ ನೀಡಿದ್ದರು ಎಂದು ಟ್ವೀಟ್‌ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚೀನಾ | ವಿಮಾನ ನಿಲ್ದಾಣದಲ್ಲಿ ಮೆಸ್ಸಿಯನ್ನು ವಶಕ್ಕೆ ಪಡೆದ ಪೊಲೀಸರು

ಗೀತಾ ಶಿವರಾಜ್‌ ಕುಮಾರ್‌, ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪನವರ ಮಗಳು. ಈ ಹಿಂದೆ ಜೆಡಿಎಸ್‌ನಲ್ಲಿದ್ದ ಗೀತಾ, 2014ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಯಡಿಯೂರಪ್ಪನವರ ವಿರುದ್ಧ ಸೋಲನುಭವಿಸಿದ್ದರು. ಇದೀಗ ಕೈಪಾಳೆಯ ಸೇರಿರುವ ಅವರು ಮತ್ತೊಮ್ಮೆ ಅದೇ ಕ್ಷೇತ್ರದಿಂದ ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದಾರೆ ಎಂಬ ಚರ್ಚೆ ಕೂಡ ಜೋರಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...