ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ಸಂಸ್ಥೆ ವಿರುದ್ಧ ಕನ್ನಡಿಗರಿಂದ ನಿಷೇಧ ಅಭಿಯಾನ ಆರಂಭವಾಗಿದೆ. ಇದೀಗ ಈ ಅಭಿಯಾನಕ್ಕೆ ನಟ ಸುದೀಪ್ ಬೆಂಬಲವಾಗಿ ನಿಂತಿದ್ದಾರೆ. ಈಗಾಗಲೇ ಫೋನ್ ಪೇಗೆ ಕರ್ನಾಟಕದಲ್ಲಿ ನಟ ಸುದೀಪ್ ಅವರು ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯನ್ನು ಹಲವು ಉದ್ಯಮಿಗಳು ವಿರೋಧಿಸಿದ್ದರು. ಹೀಗಾಗಿ ಕೈಗಾರಿಕೋದ್ಯಮಿಗಳ ವಿರುದ್ಧ ಪ್ರತಿಭಟನೆ ಕೂಡ ನಡೆದಿತ್ತು. ಅಲ್ಲದೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಹೀಗಾಗಿ ಕನ್ನಡಿಗರ ವಿರೋಧಿ ಸಮೀರ್ ನಿಗಮ್ ಒಡೆತನದ ಫೋನ್ ಪೇಯನ್ನು ಮೊಬೈಲ್ ನಿಂದ ಅನ್ ಇನ್ಸ್ಟಾಲ್ ಮಾಡಿ ಆತನಿಗೆ ಬುದ್ಧಿ ಕಲಿಸಿ ಎಂಬ ಅಭಿಯಾನ ನಡೆಯುತ್ತಿದೆ.
ಈ ಸುದ್ದಿ ಓದಿದ್ದೀರಾ? ತಂಗಲಾನ್ ಟ್ರೈಲರ್ ಬಿಡುಗಡೆ: ಆಗಸ್ಟ್ 15ರಿಂದ ಬೆಳ್ಳಿತೆರೆ ಮೇಲೆ ಅಬ್ಬರಿಸಲಿದೆ ಕೋಲಾರದ ಕಥೆ ‘ತಂಗಲಾನ್’
ಸದ್ಯ ಕನ್ನಡಿಗರ ವಿರುದ್ಧ ನಿಂತಿರುವ ಕಂಪನಿಯ ಪರ ಪ್ರಚಾರ ಮಾಡದಿರುವ ನಿಲುವಿಗೆ ಸುದೀಪ್ ಬಂದಿದ್ದಾರೆ ಎನ್ನಲಾಗಿದೆ. ಕನ್ನಡಿಗರಲ್ಲಿ ಕ್ಷಮೆ ಕೇಳದಿದ್ದರೆ ಫೋನ್ ಪೇ ಒಪ್ಪಂದ ರದ್ದು ಮಾಡುವ ನಿರ್ಧಾರ ಮಾಡುವ ಸಾಧ್ಯತೆಯಿದೆ.
“ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕಂಪನಿ, ಹಣಕ್ಕಿಂತಾ ಕನ್ನಡಿಗನಾಗಿ ನನ್ನ ಸ್ವಾಭಿಮಾನ ಮುಖ್ಯ” ಎಂದು ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.
ಕನ್ನಡಿಗರ ವಿರುದ್ಧ ಮಾತನಾಡಿದ್ದ ಫೋನ್ ಪೇ ವಿರುದ್ಧ ಅನ್ ಇನ್ಸ್ಟಾಲ್ ಅಭಿಯಾನ ಆರಂಭಿಸಿದ್ದ ಈ ಹಿನ್ನೆಲೆಯಲ್ಲಿ ಸುದೀಪ್ ಕರುನಾಡ ಜನತೆಗೆ ಬೆಂಬಲ ನೀಡಲು ಮುಂದಾಗಿದ್ದಾರೆ.





