ಇದು ನನ್ನ ಅಂತಿಮ ಶೋ: ಬಿಗ್‌ಬಾಸ್‌ಗೆ ವಿದಾಯ ಘೋಷಿಸಿದ ಸುದೀಪ್

Date:

ನಟ ಸುದೀಪ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.

ಈ ಬಗ್ಗೆ ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಗ್‌ಬಾಸ್ ಬಗ್ಗೆ ಭಾವುಕ ಮಾತುಗಳನ್ನು ಆಡಿದ್ದಾರೆ.
ಬಿಗ್ ಬಾಸ್‌ನ ಕಳೆದ ಎಲ್ಲ 11 ಆವೃತ್ತಿಗಳನ್ನು ನಾನು ತುಂಬಾ ಆನಂದಿಸಿದ್ದೇನೆ. ನನ್ನ ಮೇಲೆ ಪ್ರೀತಿ ಇಟ್ಟು ನನ್ನನ್ನು ಬೆಂಬಲಿಸಿದ ನಿಮ್ಮೆಲ್ಲರಿಗೂ ನಾನು ಆಭಾರಿಯಾಗಿದ್ದೇನೆ. ಈ ಸೀಸನ್‌ನ ಫಿನಾಲೆಯೇ ನನ್ನ ಬಿಗ್‌ಬಾಸ್‌ನ ಕೊನೆ ಹೆಜ್ಜೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ನನಗೆ ಒಂದು ಅದ್ಭುತ ಹಾಗೂ ಅವಿಸ್ಮರಣಿಯ ಪಯಣವಾಗಿತ್ತು. ಸಾಧ್ಯವಾದಷ್ಟು ಮಟ್ಟಿಗೆ ಶೋಗೆ ನ್ಯಾಯ ಒದಗಿಸಿ ನಿಮ್ಮನ್ನು ರಂಜಿಸಿದ್ದೇನೆ. ಇನ್ನೂ ಮುಂದೆಯೂ ರಂಜಿಸುತ್ತೇನೆ. ಅವಕಾಶ ಕೊಟ್ಟಿದ್ದ ಕಲರ್ಸ್ ಕನ್ನಡಕ್ಕೂ ನಾನು ಋಣಿಯಾಗಿದ್ದೇನೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ನಟ ಸುದೀಪ್ ಅವರ ನಿರೂಪಣೆಯಿಂದ ಬಿಗ್ ಬಾಸ್ ಶೋ ಸಾಕಷ್ಟು ಪ್ರೇಕ್ಷಕರನ್ನು ಹಾಗೂ ಅಭಿಮಾನಿಗಳನ್ನು ಸಂಪಾದಿಸಿದೆ.
ಶನಿವಾರ ಬಿಗ್ ಬಾಸ್ ಫಿನಾಲೆಯ ಟ್ರೋಫಿಯನ್ನು ಅನಾವರಣ ಮಾಡಲಾಗಿದೆ. ಬರುವ ಭಾನುವಾರ ಫಿನಾಲೆ ನಡೆಯಲಿದೆ ಎನ್ನಲಾಗಿದೆ.

ಈ ವಾರಾಂತ್ಯ ಗೌತಮಿ ಮನೆಯಿಂದ ಹೊರಹೋಗಿದ್ದು, ಭಾನುವಾರದ ಸಂಚಿಕೆಯಲ್ಲಿ ಧನರಾಜ್ ಆಚಾರ್ಯ ಹೊರಹೋಗಿದ್ದಾರೆ. ಫಿನಾಲೆಗೆ ಹನುಮಂತು, ತ್ರಿವಿಕ್ರಮ್ ಮತ್ತು ಮೋಕ್ಷಿತಾ ಆಯ್ಕೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...