ಲೋಕಸಭಾ ಚುನಾವಣೆಗೂ ಮುನ್ನ ರಾಜಕೀಯ ಪಾದಾರ್ಪಣೆಗೆ ಸಜ್ಜಾದ ನಟ ವಿಜಯ್

Date:

ತಮಿಳು ನಟ ವಿಜಯ್ ರಾಜಕೀಯ ಪಕ್ಷವನ್ನು ನೋಂದಾಯಿಸಲು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದು, ನಟನ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಾಕ್ಕಮ್ ಸಭೆ ಹಮ್ಮಿಕೊಂಡ ನಂತರ ಪಕ್ಷದ ಆರಂಭಕ್ಕೆ ಒಪ್ಪಿಗೆ ದೊರೆತಿದೆ. ಈ ಬೆಳವಣಿಗೆಯು ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿಯಿರುವಾಗ ಸಂಭವಿಸಿದೆ.

ಚೆನ್ನೈನಲ್ಲಿ ಗುರುವಾರ ಪಕ್ಷದ ಸಭೆ ನಡೆದಿದ್ದು ತಮಿಳು ನಟ ಪಕ್ಷವನ್ನು ನೋಂದಾಯಿಸಲು ಅರ್ಜಿ ಸಲ್ಲಿಸಲಾಗಿದೆ ಎಂದು ಮೂಲಗಳು ಅಧಿಕೃತಗೊಳಿಸಿವೆ. ಅಧ್ಯಕ್ಷರಾಗಿ ವಿಜಯ್ ಹೆಸರಿಸುವುದು ಹಾಗೂ ಪಕ್ಷದ ಕಾನೂನು ಕಟ್ಟಲೆಗಳನ್ನು ಸಿದ್ಧಪಡಿಸಲಾಗುತ್ತಿದೆ.

ಪಕ್ಷದ ನೋಂದಣಿ ಕಾರ್ಯಗಳು ಒಂದು ತಿಂಗಳೊಳಗೆ ಪೂರ್ಣಗೊಳ್ಳಲಿವೆ. ನಟ ವಿಜಯ್ ತಮಿಳುನಾಡು ಹಾಗೂ ಕೇರಳದಲ್ಲಿ ಬೃಹತ್ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದು, ಹಲವು ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲರನ್ನೂ ಒಳಗೊಳ್ಳದಿದ್ದರೆ ‘ಗಣರಾಜ್ಯ’ ಹೇಗಾಗುತ್ತದೆ?

2018ರಲ್ಲಿ ತೂತುಕುಡಿ ಪೊಲೀಸ್ ದಾಳಿಯಲ್ಲಿ ಮೃತಪಟ್ಟ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ತಮ್ಮ ರಾಜಕೀಯ ಪ್ರವೇಶಕ್ಕೆ ಗಂಭೀರ ಸೂಚನೆಯನ್ನು ನೀಡಿದ್ದರು.

ನಂತರದಲ್ಲಿ, ವಿಜಯ್ ಅಭಿಮಾನಿಗಳ ಸಂಘ ವಿಜಯ್‌ ಮಕ್ಕಳ್ ಇಯಕ್ಕಮ್ ಹಲವು ರಾಜಕೀಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿದೆ ಹಾಗೂ ತಮಿಳುನಾಡು ಸ್ಥಳೀಯ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದೆ.

ಡಿಸೆಂಬರ್‌ನಲ್ಲಿ ತಮಿಳುನಾಡಿನಲ್ಲಿ ತೀವ್ರ ಪ್ರವಾಹ ಉಂಟಾದಾಗ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ತೊಂದರೆಗೀಡಾದ ಜನರಿಗೆ ಪರಿಹಾರವನ್ನು ವಿತರಿಸಿದ್ದರು.

ಈ ಮೊದಲು ವಿಜಯ್ 2026ರಲ್ಲಿ ರಾಜಕೀಯ ಪ್ರವೇಶಿಸುವುದಾಗಿ ಸೂಚನೆ ನೀಡಿದ್ದರು. ಆದಾಗ್ಯೂ, ನಟನ ಅಭಿಮಾನಿಗಳು ಶೀಘ್ರವಾಗಿ ಪಕ್ಷವನ್ನು ನೋಂದಾಯಿಸುವಂತೆ ನಟನಿಗೆ ಒತ್ತಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...