ಹೋಟೆಲ್‌ ಧ್ವಂಸ ಪ್ರಕರಣ | ತೆಲುಗು ನಟರಾದ ವೆಂಕಟೇಶ್, ರಾಣಾ ದಗ್ಗುಬಾಟಿ ವಿರುದ್ಧ ಕ್ರಿಮಿನಲ್ ಕೇಸ್

Date:

ಗುತ್ತಿಗೆಗೆ ನೀಡಿದ್ದ ಹೋಟೆಲ್‌ಅನ್ನು ಅವಧಿಗೂ ಮುನ್ನವೇ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿಯೊಬ್ಬರು ತೆಲುಗು ನಟರಾದ ವೆಂಕಟೇಶ್ ದಗ್ಗುಬಾಟಿ, ರಾಣಾ ದಗ್ಗುಬಾಟಿ, ನಿರ್ಮಾಪಕ ಡಿ.ಸುರೇಶ್ ಸೇರಿದಂತೆ ಅವರ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ನ್ಯಾಯಾಲಯದ ನಿರ್ದೇಶನದಂತೆ ನಟರು ಸೇರಿದಂತೆ ದಗ್ಗುಬಾಟಿ ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪಿತೂರಿ, ಅತಿಕ್ರಮಣ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್‌ಗಳಡಿ ಜನವರಿ 11ರಂದು ಫಿಲ್ಮ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

2014ರಲ್ಲಿ ದಗ್ಗುಬಾಟಿ ಕುಟುಂಬವು ಫಿಲ್ಮ್‌ ನಗರದ ಫ್ಲ್ಯಾಟ್‌ನಲ್ಲಿ ಭೂಮಿಯನ್ನು ಗುತ್ತಿಗೆಗೆ ನೀಡಿತ್ತು. ನೋಂದಾಯಿತ ಗುತ್ತಿಗೆ ಪತ್ರ ನೀಡಿದ ನಂತರ ಅಲ್ಲಿ ಹೋಟೆಲ್ ತೆರೆಯಲಾಗಿತ್ತು ಎಂದು ದೂರುದಾರರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಗುತ್ತಿಗೆ ಪತ್ರದ ಅವಧಿ ಚಾಲ್ತಿಯಲ್ಲಿದ್ದರು ಕೂಡ ವೆಂಕಟೇಶ್ ಸೇರಿದಂತೆ ದಗ್ಗುಬಾಟಿ ಕುಟುಂಬಸ್ಥರು ಹೋಟೆಲ್ ತೆರವುಗೊಳಿಸಲು ಪ್ರಯತ್ನಿಸಿದ್ದರು. ನಂತರ ಅವರ ವಿರುದ್ಧ ತಡೆಯಾಜ್ಞೆಗಾಗಿ ಸಿಟಿ ಸಿವಿಲ್ ನ್ಯಾಯಾಲಯದ ಮೊರೆಹೋಗಿದ್ದೆವು. ಪ್ರಕರಣದ ವಿಚಾರಣೆ ಇನ್ನೂ ಬಾಕಿಯಿದೆ. ಹೀಗಿದ್ದರೂ ದಗ್ಗುಬಾಟಿ ಕುಟುಂಬಸ್ಥರು ಹೋಟೆಲ್‌ಅನ್ನು ಕೆಡವಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ ದೂರುದಾರ ನಾಂಪಲ್ಲಿ ಕೋರ್ಟ್ ಮೊರೆ ಹೋಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಅದರಂತೆ ದಗ್ಗುಬಾಟಿ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...