20 ಯೂಟ್ಯೂಬ್ ಚಾನಲ್‌ಗಳ ವಿರುದ್ಧ ದೂರು ದಾಖಲಿಸಿದ ನಟಿ ಹನಿ ರೋಸ್

Date:

ತಮ್ಮ ವಿರುದ್ಧ ಮಾನಹಾನಿ, ಲೈಂಗಿಕ ಕಿರುಕುಳ ಹಾಗೂ ಅಶ್ಲೀಲವಾದ ಕಂಟೆಂಟ್ ಬರೆದು, ತಿರುಚಿದ ವಿಡಿಯೋಗಳೊಂದಿಗೆ ಪ್ರಸಾರ ಮಾಡಿರುವ ಸುಮಾರು 20 ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಮಲಯಾಳಂ ನಟಿ ಹನಿ ರೋಸ್‌ ದೂರು ದಾಖಲಿಸಿದ್ದಾರೆ. ಕೇರಳದ ಎರ್ನಾಕುಲಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ, ತಮಗೆ ಚೆಮ್ಮನೂರು ಜ್ಯುವೆಲರ್ಸ್‌ನ ಬಾಬಿ ಚೆಮ್ಮನೂರ ಎಂಬವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಹನಿ ರೋಸ್ ಆರೋಪಿಸಿದ್ದರು. ಪ್ರಕರಣದಲ್ಲಿ ಆರೋಪಿ ಬಾಬಿ ಚೆಮ್ಮನೂರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ, ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ ಹನಿ ರೋಸ್‌ ಅವರ ಬಗ್ಗೆ ಪ್ರಚೋದನಾಕಾರಿ, ಮಾನಹಾನಿ ಮಾಡುವಂತಹ ಚಿತ್ರಗಳು ಹಾಗೂ ತಿರುಚಿದ ವಿಡಿಯೋಗಳೊಂದಿಗೆ ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ತಮ್ಮ ವಿರುದ್ಧ ಅವಮಾನಕಾರಿಯಾಗಿ ವಿಷಯಗಳನ್ನು ಬಿತ್ತಿರಿಸಿರುವ ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟಿ ಹನಿ ರೋಸ್ ಒತ್ತಾಯಿಸಿದ್ದಾರೆ. ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆಯ ಸೆಕ್ಷನ್ 75 ಮತ್ತು ಸೆಕ್ಷನ್ 67 ಹಾಗೂ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹನಿ ರೋಸ್ ಅವರು ಕನ್ನಡ ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ. ಅಜಂತಾ ಮತ್ತು ನಂಜನಗೂಡು ನಂಜುಂಡ ಅವರು ನಟಿಸಿರುವ ಕನ್ನಡ ಸಿನಿಮಾಗಳು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...