ನಟಿ ರನ್ಯಾ​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

Date:

ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿ​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಅರ್ಕಾವತಿ ಬಡಾವಣೆಯಲ್ಲಿ ಇರುವ ರಾನ್ಯಾ ರಾವ್ ಅವರ ನಿವೇಶನ, ವಿಕ್ಟೋರಿಯಾ ಲೇಔಟ್​ನಲ್ಲಿರುವ ಮನೆ, ಆನೇಕಲ್‌ ಮತ್ತು ತುಮಕೂರು ಬಳಿಯ ಅವರ ಕೃಷಿ ಜಮೀನುಗಳನ್ನು ಇಡಿ ಜಪ್ತಿ ಮಾಡಿದೆ.

ಇದೇ ವರ್ಷದ ಮಾರ್ಚ್‌ 3ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಡೈರೆಕ್ಟರೇಟ್ ಆಫ್ ರವೆನ್ಯೂ ಇಂಟೆಲಿಜೆನ್ಸ್ (DRI) ಬಂಧಿಸಿತ್ತು. ರನ್ಯಾ ದುಬೈನಿಂದ ಸುಮಾರು 14.2 ಕೆ.ಜಿ ಚಿನ್ನವನ್ನು ಕ್ರಮವಾಗಿ ಬೆಂಗಳೂರಿಗೆ ತಂದಿದ್ದಾರೆ ಎಂದು ಆರೋಪಿಸಲಾಗಿತ್ತು. ಅಂದಿನಿಂದಲೂ ರನ್ಯಾ ಜೈಲಿನಲ್ಲಿಯೇ ಇದ್ದಾರೆ.

ನಟಿ ರನ್ಯಾ ರಾವ್​, ತರುಣ್ ಕೊಂಡೂರು ಹಾಗೂ ಇತರರ ಗುಂಪು ಸಕ್ರಿಯವಾಗಿ ಚಿನ್ನ ಕಳ್ಳಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ರನ್ಯಾ ವಿರುದ್ಧ ಸಿಬಿಐ ಮತ್ತು ಡಿಆರ್‌ಐ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿವೆ. ಸಿಬಿಐ ಮತ್ತು ಡಿಆರ್‌ಐನ ಅನುಮತಿ ಪಡೆದು ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿದೆ. ರನ್ಯಾ ಅವರ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ಮೇಲೆ ಗಂಭೀರ ಆರೋಪ: ಕ್ಲಿನಿಕಲ್ ಪ್ರಯೋಗಕ್ಕೆ ಬಡರೋಗಿಗಳ ಬಳಕೆ

ರನ್ಯಾ ಮತ್ತು ಅವರ ತಂಡವು ದುಬೈ ಮತ್ತು ಉಗಾಂಡಾದಿಂದ ಚಿನ್ನವನ್ನು ಖರೀದಿಸಿ, ಹವಾಲಾ ಮೂಲಕ ನಗದು ಪಾವತಿ ಮಾಡುತ್ತಿದ್ದರು. ದುಬೈನಲ್ಲಿ ಚಿನ್ನವನ್ನು ಸ್ವಿಟ್ಜರ್ಲ್ಯಾಂಡ್, ಅಮೆರಿಕಗೆ ತೆಗೆದುಕೊಂಡು ಹೋಗುವುದಾಗಿ ಸುಳ್ಳು ಕಸ್ಟಮ್ಸ್ ಡಿಕ್ಲರೇಷನ್ ಪಡೆಯುತ್ತಿದ್ದರು ಎಂದು ಇ.ಡಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...