ಗುಜರಾತ್ ಗಲಭೆ ಉಲ್ಲೇಖ ವಿವಾದ; ಎಲ್‌2: ಎಂಪುರಾನ್‌ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ

Date:

ಮಲಯಾಳಂ ಸಿನಿಮಾ ಲೋಕದ ಹಿರಿಯ ನಟ ಮೋಹನ್ ಲಾಲ್ ನಟನೆಯ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ ಇತ್ತೀಚಿನ ಮಲಯಾಳಂ ಸಿನಿಮಾ ಎಲ್‌2: ಎಂಪುರಾನ್‌ನ ಸುಮಾರು 17 ದೃಶ್ಯಗಳಿಗೆ ಕತ್ತರಿ ಬೀಳಲಿದೆ. ಗುಜರಾತ್ ಗಲಭೆ ಉಲ್ಲೇಖದ ಬಗ್ಗೆ ಆರ್‌ಎಸ್‌ಎಸ್, ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದ್ದಂತೆ ಚಿತ್ರ ತಂಡ 17 ದೃಶ್ಯಗಳನ್ನು ಬದಲಾಯಿಸಲು ನಿರ್ಧರಿಸಿದೆ.

‘ಬಾಬಾ ಬಜರಂಗಿ’ ಎಂದು ಕರೆಯಲ್ಪಡುವ ಎದುರಾಳಿ (ವಿಲನ್) ಪಾತ್ರದ ಹೆಸರನ್ನು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ. 2002ರಲ್ಲಿ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ಕೋಮು ಹಿಂಸಾಚಾರ ನಡೆದಿದೆ. ಈ ಹಿಂಸಾಚಾರವನ್ನು ಹೋಲುವ ದೃಶ್ಯಗಳು ಸಿನಿಮಾದಲ್ಲಿದೆ ಎಂಬ ಕಾರಣಕ್ಕೆ ಬಿಜೆಪಿ, ಆರ್‌ಎಸ್‌ಎಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? 2002ರ ಗುಜರಾತ್ ಗಲಭೆ ಆರೋಪಿಗಳೇಕೆ ಸರದಿಯಂತೆ ನ್ಯಾಯಾಲಯದಿಂದ ಬಿಡುಗಡೆಯಾಗುತ್ತಿದ್ದಾರೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್‌ 27ರಂದು ಸಿನಿಮಾ ಬಿಡುಗಡೆಯಾಗಿದ್ದು, ಗುಜರಾತ್ ಗಲಭೆ ಹೋಲುವ ಚಿತ್ರಣವಿದ್ದ ಕಾರಣ ಕೆಲವು ದೃಶ್ಯಗಳು ಕಾಲ್ಪನಿಕ ಎಂದು ಉಲ್ಲೇಖಿಸಿದೆ. ಆದರೆ ಬಲರಾಜ್ ಪಟೇಲ್ ಯಾನೆ ಬಾಬಾ ಬಜರಂಗಿ ಎಂಬ ಪಾತ್ರವು ಬಾಬುಭಾಯಿ ಪಟೇಲ್ ಅಲಿಯಾಸ್ ಬಾಬು ಬಜರಂಗಿಗೆ ಹೋಲುವ ಕಾರಣದಿಂದಾಗಿ ಬಲಪಂಥೀಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಬಜರಂಗದಳದ ಮಾಜಿ ನಾಯಕ ಬಾಬು ಬಜರಂಗಿ 2002ರ ಗುಜರಾತ್ ಗಲಭೆಯಲ್ಲಿ ಪ್ರಮುಖ ಅಪರಾಧಿ. ವಿಶೇಷವಾಗಿ 97 ಮುಸ್ಲಿಮರನ್ನು ಕೊಂದ ನರೋಡಾ ಪಾಟಿಯಾ ಹತ್ಯಾಕಾಂಡದ ನೇತೃತ್ವವನ್ನು ವಹಿಸಿದ್ದ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಆದರೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ.

ಭೀಕರವಾದ ನರೋಡಾ ಪಾಟಿಯಾ ಹತ್ಯಾಕಾಂಡದಲ್ಲಿ ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯಗಳ ದೃಶ್ಯಗಳಿರುವ ಕಾರಣ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದೀಗ ಸಿನಿಮಾ ತಂಡ 17ಕ್ಕೂ ಅಧಿಕ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಕೊಂಡಿದೆ. ಮಹಿಳೆಯರ ಮೇಲೆ ನಡೆಯುವ ಹಿಂಸಾಚಾರದ ಗ್ರಾಫಿಕ್ ದೃಶ್ಯವನ್ನು ಕಡಿಮೆ ಮಾಡಲಾಗುವುದು ಎಂದು ಚಿತ್ರ ತಂಡ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...