ಯುಟ್ಯೂಬ್‌ನಲ್ಲಿ ಸಖತ್‌ ಸದ್ದು ಮಾಡುತ್ತಿದೆ ʼಏಜೆಂಟ್‌ʼ ಟ್ರೈಲರ್‌

Date:

ಏಪ್ರಿಲ್‌ 28ಕ್ಕೆ ತೆರೆಗೆ ಬರಲಿದೆ ಏಜೆಂಟ್‌ ಸಿನಿಮಾ

ಪ್ರಮುಖ ಪಾತ್ರದಲ್ಲಿ ಗಮನ ಸೆಳೆಯುವ ಮಮ್ಮುಟ್ಟಿ

ತೆಲುಗಿನ ಖ್ಯಾತ ನಟ ಅಖಿಲ್‌ ಅಕ್ಕಿನೇನಿ ಅಭಿನಯದ ʼಏಜೆಂಟ್‌ʼ ಸಿನಿಮಾದ ಬಹುನಿರೀಕ್ಷಿತ ಟ್ರೈಲರ್‌ ಮಂಗಳವಾರ ಬಿಡುಗಡೆಯಾಗಿದ್ದು, ಆ್ಯಕ್ಷನ್ ದೃಶ್ಯಗಳ ಮೂಲಕ ಸಿನಿ ರಸಿಕರ ಗಮನ ಸೆಳೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಏಜೆಂಟ್‌ʼ ಸಿನಿಮಾ ಪತ್ತೆಧಾರಿ ಕಥಾಹಂದವನ್ನು ಹೊಂದಿದ್ದು, ಆ್ಯಕ್ಷನ್ ಮತ್ತು ಥ್ರಿಲ್ಲರ್‌ ಅಂಶಗಳನ್ನು ಒಳಗೊಂಡಿದೆ ಎಂಬುದನ್ನು ಎರಡೂವರೆ ನಿಮಿಷಗಳ ಟ್ರೈಲರ್‌ನಲ್ಲಿ ಸೂಚ್ಯವಾಗಿ ತೋರಿಸಲಾಗಿದೆ. ಅಖಿಲ್‌ ಅಕ್ಕಿನೇನಿ ಆ್ಯಕ್ಷನ್ ಲುಕ್‌ನಲ್ಲಿ ಮಿಂಚಿದ್ದು, ಸಾಕ್ಷಿ ವೈದ್ಯ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಲಯಾಳಂನ ಹಿರಿಯ ನಟ ಮಮ್ಮುಟ್ಟಿ ಮತ್ತು ಬಾಲಿವುಡ್‌ನ ಖ್ಯಾತ ನಟ ಡಿನೋ ಮೊರಿಯಾ ವಿಕ್ರಮ್‌ಜಿತ್‌ ವಿರ್ಕ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಆ್ಯಕ್ಷನ್ ಪ್ಯಾಕ್‌ ಕಥಾಹಂದರವುಳ್ಳ ಈ ಚಿತ್ರ ಏಪ್ರಿಲ್‌ 28ರಂದು ತೆರೆಗೆ ಬರಲಿದೆ. ಈ ಹಿನ್ನೆಲೆ ಅಖಿಲ್‌ ಅಕ್ಕಿನೇನಿ ಸೇರಿದಂತೆ ಇಡೀ ಚಿತ್ರತಂಡ ಅಬ್ಬರದ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಟ್ರೈಲರ್‌ ಬಿಡುಗಡೆ ಮಾಡಲಾಗಿದೆ.

ಹಾಡುಗಳು ಮತ್ತು ಟ್ರೈಲರ್‌ ಮೂಲಕ ನಿರೀಕ್ಷೆ ಹೆಚ್ಚಿಸಿರುವ ʼಏಜೆಂಟ್‌ʼ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ದೇಶಕ ಸುರೇಂದರ್‌ ರೆಡ್ಡಿ ಆ್ಯಕ್ಷನ್ ಕಟ್‌ ಹೇಳಿದ್ದಾರೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಾಮಬ್ರಹ್ಮಂ ಸುಂಕರ ಬಂಡವಾಳ ಹೂಡಿದ್ದು, ಎಸ್‌ ತಮನ್‌ ಸಂಗೀತ ಸಂಯೋಜನೆ ಮಾಡಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...