ಇಂಡಿಯಾ-ಭಾರತ್‌ ವಿವಾದ : ಅಕ್ಷಯ್‌ ಕುಮಾರ್‌ ಸಮಯ ಸಾಧಕ ಬುದ್ಧಿಗೆ ಛೀಮಾರಿ ಹಾಕಿದ ನೆಟ್ಟಿಗರು

Date:

ಕೇಂದ್ರ ಸರ್ಕಾರ ದೇಶದ ಹೆಸರನ್ನು ಬದಲಿಸಲು ಮುಂದಾಗಿದೆ ಎಂಬ ಚರ್ಚೆ ಜೋರಾಗಿರುವ ಹೊತ್ತಿನಲ್ಲೇ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಅವರ ಸಮಯ ಸಾಧಕತನ ಕೂಡ ಜಗಜ್ಜಾಹೀರಾಗಿದೆ.

ಇತ್ತೀಚೆಗೆ ರಾಷ್ಟ್ರಪತಿಗಳ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ʼಪ್ರೆಸಿಡೆಂಟ್‌ ಆಫ್‌ ಇಂಡಿಯಾʼ ಬದಲು ʼಪ್ರೆಸಿಡೆಂಟ್‌ ಆಫ್‌ ಭಾರತ್‌ʼ ಎಂದು ಉಲ್ಲೇಖಿಸಲಾಗಿತ್ತು. ಈ ಸಂಬಂಧ ದೇಶಾದ್ಯಂತ ಪರ ವಿರೋಧದ ಚರ್ಚೆಗಳು ಶುರುವಾಗಿವೆ. ಇದೇ ಸೂಕ್ಷ್ಮ ಸಂದರ್ಭವನ್ನು ಬಳಸಿಕೊಂಡು ಸಿನಿಮಾ ಪ್ರಚಾರಕ್ಕೆ ಮುಂದಾಗಿರುವ ಅಕ್ಷಯ್‌ ಕುಮಾರ್‌, ತಮ್ಮ ನೂತನ ಚಿತ್ರದ ಪೋಸ್ಟರ್‌ಗಳನ್ನು ಸರಣಿಯಾಗಿ ಬಿಡುಗಡೆ ಮಾಡಿದ್ದಾರೆ. ಚಿತ್ರದ ಟ್ಯಾಗ್‌ ಲೈನ್‌ನಲ್ಲಿ ʼಇಂಡಿಯಾʼ ಬದಲು ʼಭಾರತ್‌ʼ ಎಂದು ಉಲ್ಲೇಖಿಸಿ ಪರಿಸ್ಥಿತಿಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.

ಅಷ್ಟೇ ಅಲ್ಲ, ಅಕ್ಷಯ್‌ ಕುಮಾರ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ʼಮಿಶನ್‌ ರಾಣಿಗಂಜ್‌ʼ ಚಿತ್ರದ ಮೂರು ಪೋಸ್ಟರ್‌ಗಳನ್ನು ಕಳಪೆಯಾಗಿ ಎಡಿಟ್‌ ಮಾಡಲಾಗಿದೆ ಎಂದು ನೆಟ್ಟಿಗರು ವ್ಯಂಗ್ಯವಾಡುತ್ತಿದ್ದಾರೆ. ಪ್ರಚಾರದಾಸೆಗೆ ಬಿದ್ದು ತರಾತುರಿಯಲ್ಲಿ ಒಂದೇ ಫೋಟೋವನ್ನು ಬಳಸಿ ಎರಡೆರೆಡು ಪೋಸ್ಟರ್‌ಗಳನ್ನು ಮಾಡಿದ್ದಾರೆ. ಎರಡೂ ಪೋಸ್ಟರ್‌ಗಳಲ್ಲಿ ಅಕ್ಷಯ್‌ ಕುಮಾರ್‌ ಜೊತೆಗೆ ನಿಂತಿರುವ ಕಲಾವಿದರ ಹಾವ-ಭಾವ ಬದಲಾಗಿಲ್ಲ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಷಯ್‌ ಕುಮಾರ್‌ ʼಮಿಶನ್‌ ರಾಣಿಗಂಜ್‌ʼ ಹೆಸರಿನ ನೈಜ ಘಟನೆ ಆಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. 1989ರಲ್ಲಿ ಪಶ್ಚಿಮ ಬಂಗಾಳದ ರಾಣಿಗಂಜ್‌ನ ಕಲ್ಲಿದ್ದಲಿನ ಗಣಿಯಲ್ಲಿ ಸಿಲುಕಿದ್ದ 64 ಮಂದಿಯನ್ನು ಜಸ್ವಂತ್‌ ಸಿಂಗ್‌ ಗಿಲ್‌ ಎನ್ನುವ ಸಾಹಸಿ ತನ್ನ ಸಹ ಕಾರ್ಮಿಕರ ನೆರವಿನೊಂದಿಗೆ ರಕ್ಷಿಸಿದ್ದರು. ಬಾಲಿವುಡ್‌ನ ನಿರ್ದೆಶಕ ಸುರೇಶ್‌ ದೇಸಾಯಿ ಇದೇ ರೋಚಕ ಕಥೆಯನ್ನು ʼಮಿಶನ್‌ ರಾಣಿಗಂಜ್‌ʼ ಹೆಸರಿನಲ್ಲಿ ತೆರೆಗೆ ಅಳವಡಿಸಲು ಮುಂದಾಗಿದ್ದಾರೆ. ಅಕ್ಷಯ್‌ ಕುಮಾರ್‌, ಸಾಹಸಿ ಜಸ್ವಂತ್‌ ಸಿಂಗ್‌ ಗಿಲ್‌ ಅವರ ಪಾತ್ರದಲ್ಲಿ ನಟಿಸುತ್ತಿದ್ದು, ಪರಿಣಿತಿ ಚೋಪ್ರಾ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...