77 ಲಕ್ಷ ರೂ ವಂಚನೆ : ನಟಿ ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಬಂಧನ

Date:

ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿಯನ್ನು ಮುಂಬೈನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ ಆರೋಪಿ. ಭಟ್‌ ನಿರ್ಮಾಣ ಸಂಸ್ಥೆ ಎಟರ್ನಲ್ ಸನ್‌ಶೈನ್ ಪ್ರೊಡಕ್ಷನ್ಸ್ ಪ್ರೈವೇಟ್ ಲಿಮಿಟೆಡ್‌ ಖಾತೆ ಹಾಗೂ ನಟಿಯ ಖಾತೆಯಿಂದ ಸುಮಾರು 76.9 ಲಕ್ಷ ರೂ. ಹಣ ವಂಚಿಸಿದ ಆರೋಪ ವೇದಿಕಾ ಮೇಲೆ ಹೊರಿಸಲಾಗಿದೆ. 2022ರ ಮೇ ಮತ್ತು 2024ರ ಆಗಸ್ಟ್‌ ತಿಂಗಳ ನಡುವೆ ಈ ವಂಚನೆ ಎಸಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಆಲಿಯಾ ಭಟ್‌ ಅವರ ತಾಯಿ, ನಟಿ-ನಿರ್ದೇಶಕಿ ಸೋನಿ ರಜ್ದಾನ್ ಕಳೆದ ಜನವರಿ 23ರಂದು ಜುಹು ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ದೂರನ್ನು ಆಧರಿಸಿ ಕ್ರಿಮಿನಲ್‌ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿ ವೇದಿಕಾಗಾಗಿ ಹುಡುಕಾಟ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತಮಿಳು ನಾಡು ಚುನಾವಣೆ: ಟಿವಿಕೆ ಪಕ್ಷದಿಂದ ವಿಜಯ್‌ ಸಿಎಂ ಅಭ್ಯರ್ಥಿ

ಪೊಲೀಸ್‌ ಮೂಲಗಳ ಪ್ರಕಾರ, ವೇದಿಕಾ 2021ರಿಂದ 2024ರ ವರೆಗೆ ಆಲಿಯಾ ಭಟ್‌ ಅವರ ಆಪ್ತ ಸಹಾಯಕಿಯಾಗಿ ಕೆಲಸ ಮಾಡಿದ್ದರು. ಈ ವೇಳೆ ನಟಿಗೆ ಸಂಬಂಧಿಸಿದ ಹಣಕಾಸಿನ ದಾಖಲೆಗಳನ್ನು ನೋಡಿಕೊಳ್ಳುತ್ತಿದ್ದರು. ನಟಿಗೆ ಸಂಬಂಧಿದ ವೇಳಾಪಟ್ಟಿಯನ್ನೂ ಈ ಮಹಿಳೆ ನಿರ್ವಹಿಸುತ್ತಿದ್ದರು. ಈ ಸಮಯದಲ್ಲಿ ನಕಲಿ ಹಣಕಾಸಿನ ಬಿಲ್‌ಗಳನ್ನು ತಯಾರಿಸಿ, ಆಲಿಯಾ ಭಟ್‌ ಅವರಿಂದ ಸಹಿ ಮಾಡಿಸಿ ನಟರೊಬ್ಬರಿಗೆ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಲಿಯಾ ಭಟ್‌ ಅವರ ತಾಯಿ ದೂರು ನೀಡಿದ್ದ ಬಳಿಕ ತಲೆಮರೆಸಿಕೊಂಡಿದ್ದ ವೇದಿಕಾ ಆಗಾಗ ಸ್ಥಳ ಬದಲಾಯಿಸುತ್ತಿರುವುದನ್ನು ಪೊಲೀಸರು ಗಮನಿಸಿದ್ದರು. ಕೊನೆಗೆ ರಾಜಸ್ಥಾನದ ಬಳಿಕ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದ್ದರು. ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಮುಂಬೈಗೆ ಕರೆತಂದಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...