ಕುಡಿತದಿಂದ ಅನಾರೋಗ್ಯ; ತಮಿಳು ನಟ ಸಾವು

Date:

ಅತಿಯಾದ ಕುಡಿತದಿಂದ ಅನಾರೋಗ್ಯವುಂಟಾದ ಕಾರಣ ತಮಿಳು ನಟ ಬಿಜಿಲಿ ರಮೇಶ್ ಇಂದು ನಿಧನರಾಗಿದ್ದಾರೆ.

ಕುಡಿತದ ಕಾರಣದಿಂದ ಕಳೆದ ಕೆಲವು ದಿನಗಳಿಂದ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ 46 ವರ್ಷದ ರಮೇಶ್ ಇಂದು ಬೆಳಗ್ಗೆ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ತಮಿಳು ಚಿತ್ರರಂಗದಲ್ಲಿ ರಮೇಶ್ ಚಿತ್ರರಂಗಕ್ಕೆ ಕಾಲಿಡುವ ಮುನ್ನ ಯೂಟ್ಯೂಬ್‌ನಲ್ಲಿ ಪ್ರ್ಯಾಂಕ್ ವಿಡಿಯೋಗಳನ್ನು ಮಾಡಿ ಜನಪ್ರಿಯರಾಗಿದ್ದರು. ಆ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದಾದ ನಂತರ 2018 ರಲ್ಲಿ ನಯನತಾರಾ ಅಭಿನಯಿಸಿದ ನೆಲ್ಸನ್ ದಿಲೀಪ್‌ ಕುಮಾರ್ ನಿರ್ದೇಶನದ ‘ಕೊಲಮಾವು ಕೊಕಿಲ’ ಚಿತ್ರದಲ್ಲಿ ಕಾಣಿಸಿಕೊಂಡ ನಂತರ ಹಲವು ಸಿನಿಮಾಗಳಲ್ಲಿ ಅವಕಾಶಗಳು ದೊರೆತವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼನಟ್ಪೆತುನೈʼ, ʼಆದೈʼ, ʼಪೊನ್ಮಗಲ್ ವಂದಾಲ್ʼ, ʼಕೋಮಾಲಿʼ ಯಂತಹ ಸಿನಿಮಾದಲ್ಲಿನ ಅವರ ಹಾಸ್ಯ ಪಾತ್ರದ ಅಭಿನಯಕ್ಕೆ ಪ್ರೇಕ್ಷಕರು ಮನಸೋತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾನವ ಘನತೆಗಾಗಿ ಹೋರಾಟ – ಕನ್ನಡ ತಮಿಳು ಎಂಬ ಗಡಿಗೆರೆಗಳು ಸಲ್ಲದು

ಸ್ಟಾರ್ ನಟ ರಜಿನಿಕಾಂತ್ ಅವರ ದೊಡ್ಡ ಅಭಿಮಾನಿಯಾಗಿದ್ದ ಅವರು ಒಂದು ಸಲವಾದರೂ ಅವರೊಂದಿಗೆ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು.

ಬಣ್ಣದ ಲೋಕದಲ್ಲಿ ಮಿಂಚಿದ್ದ ರಮೇಶ್ ನಿಜ ಜೀವನದಲ್ಲಿ ಕುಡಿತದ ಚಟಕ್ಕೆ ಅಂಟುಕೊಂಡಿದ್ದರು. ಇದರಿಂದ ಅವರ ಆರೋಗ್ಯ ಹದಗೆಡಲು ಪ್ರಾರಂಭವಾಗಿತ್ತು. ಮದ್ಯಪಾನದಿಂದ ಆರೋಗ್ಯ ಹಾಳಾದ ಕಾರಣ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅತಿಯಾದ ಕುಡಿತದಿಂದಾಗಿ ಅವರ ಲಿವರ್‌ಗೆ ಹಾನಿಯಾಗಿತ್ತು.

ಅನೇಕರು ಅವರ ಆರ್ಥಿಕ ಸಂಕಷ್ಟಕ್ಕೆ ಮಿಡಿದು ಧನಸಹಾಯವನ್ನು ಮಾಡಿದ್ದರು. ನಟನ ನಿಧನಕ್ಕೆ ಚಿತ್ರರಂಗದ ಆಪ್ತರು ಹಾಗೂ ಗಣ್ಯರು ಕಂಬನಿ ಮಿಡಿದಿದ್ದಾರೆ. ಚೆನ್ನೈನ ಎಂಜಿಆರ್ ನಗರದಲ್ಲಿರುವ ರುದ್ರಭೂಮಿಯಲ್ಲಿ ಸಂಜೆ 5 ಗಂಟೆಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...