ಆದಿಪುರುಷ್‌ ಸಿನಿಮಾ ನೋಡಲು ಹೋದ ಪ್ರೇಕ್ಷಕರ ಮೇಲೆ ಪ್ರಭಾಸ್‌ ಅಭಿಮಾನಿಗಳಿಂದ ಹಲ್ಲೆ

Date:

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ಆದಿಪುರುಷ್‌ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹೈದರಾಬಾದ್‌ನ ಥಿಯೇಟರ್‌ನಲ್ಲಿ ಈ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕರೊಬ್ಬರ ಮೇಲೆ ಹನುಮ ಭಕ್ತರು ಎಂದು ಹೇಳಿಕೊಂಡ ಗುಂಪಿನವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.

ರಾಮಾಯಣದ ಕಥೆಯನ್ನು ಆಧರಿಸಿರುವ ಆದಿಪುರುಷ್‌ ಸಿನಿಮಾ ಪ್ರದರ್ಶಿಸುವ ಎಲ್ಲ ಥಿಯೇಟರ್‌ಗಳಲ್ಲಿ ʼಹನುಮಂತʼನಿಗಾಗಿ ಒಂದು ಸೀಟನ್ನು ಕಾಯ್ದಿರಿಸಲು ಚಿತ್ರದ ನಿರ್ದೇಶಕ ಓಂ ರಾವತ್‌ ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ನಿರ್ಮಾಪಕರಿಗೆ ಮನವಿ ಮಾಡಿದ್ದರು. ಅದರಂತೆ ಎಲ್ಲ ಥಿಯೇಟರ್‌ಗಳಲ್ಲೂ ಹನುಮಂತನಿಗಾಗಿ ಒಂದು ಸೀಟನ್ನು ಖಾಲಿ ಬಿಡಲಾಗಿತ್ತು. ಹೈದರಾಬಾದ್‌ನ ʼಬ್ರಮರಾಂಭʼ ಥಿಯೇಟರ್‌ನಲ್ಲಿ ಹೀಗೆ ಖಾಲಿ ಇದ್ದ ಸೀಟಿನಲ್ಲಿ ಪ್ರೇಕ್ಷಕನೋರ್ವ ತಿಳಿಯದೆ ಕುಳಿತುಕೊಂಡಿದ್ದಕ್ಕಾಗಿ ಹನುಮ ಭಕ್ತರು ಎಂದು ಹೇಳಿಕೊಂಡವರು ಆತನನ್ನು ಮನಬಂದಂತೆ ಥಳಿಸಿದ್ದಾರೆ.

ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಘಟನೆಯ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಹಲವರು ಗುಂಪಾಗಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು, ಕೆಲವರು ಗೊಂದಲವನ್ನು ಬಗೆ ಹರಿಸುವ ಪ್ರಯತ್ನ ಕೂಡ ಮಾಡಿದ್ದಾರೆ. ಇನ್ನೊಂದೆಡೆ ʼಆದಿಪುರುಷ್‌ʼ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳಿಗೆ ತನ್ನ ಅಭಿಪ್ರಾಯ ಹೇಳುತ್ತಿದ್ದ ಪ್ರೇಕ್ಷಕನ ಮೇಲೂ ಪ್ರಭಾಸ್‌ ಅಭಿಮಾನಿಗಳು ಹಲ್ಲೆ ನಡೆಸಿದ್ದಾರೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಹಲ್ಲೆ ನಡೆಸಿದವರ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬ್ರಮರಾಂಭʼ ಥಿಯೇಟರ್‌ ಮಾತ್ರವಲ್ಲದೆ, ದೇಶಾದ್ಯಂತ ಹಲವು ಥಿಯೇಟರ್‌ಗಳಲ್ಲಿ ʼಹನುಮಂತʼನಿಗಾಗಿ ಕಾಯ್ದಿಸಿಲಾಗಿರುವ ಸೀಟುಗಳಿಗೆ ಪೂಜೆ ಸಲ್ಲಿಸಿ ನಂತರ ʼಆದಿಪುರುಷ್‌ʼ ಸಿನಿಮಾ ಪ್ರದರ್ಶನ ಪ್ರಾರಂಭಿಸಲಾಗುತ್ತಿದೆ. ಈಗಾಗಲೇ ಸಿನಿಮಾ ನೋಡಿರುವ ಪ್ರಭಾಸ್‌ ಅಭಿಮಾನಿಗಳು, “ಚಿತ್ರದಲ್ಲಿ ನಿರೂಪಣೆ ಸರಿ ಇಲ್ಲ, ಗ್ರಾಫಿಕ್ಸ್‌ ಕೂಡ ಹೇಳಿಕೊಳ್ಳುವ ಮಟ್ಟಿಗಿಲ್ಲ” ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ.ಕಾಮ್ ಕೇಳುದಾಣ ಕನ್ನಡ ಪಾಡ್‌ಕಾಸ್ಟ್ Eedina.Com Kannada Podcast
ಈದಿನ.ಕಾಮ್ ಕೇಳುದಾಣ
+ posts

ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...