ನಟ ಪವನ್‌ ಕಲ್ಯಾಣ್‌ಗೆ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ನೀಡಿದ ವೈಎಸ್‌ಆರ್‌ಸಿಪಿ ಶಾಸಕ

Date:

ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್‌ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ ಮಾಜಿ ಸಚಿವ ಮತ್ತು ವೈಎಸ್‌ಆರ್‌ಸಿಪಿ ಶಾಸಕ ಪರ್ನಿ ನಾನಿ, “ನೀನು ಎಲ್ಲ ಸಮಯದಲ್ಲೂ ಚಪ್ಪಲಿಯನ್ನು ತೋರಿಸುತ್ತೀಯಲ್ಲ ನೀನೇನು ದೊಡ್ಡ ಗಂಡಸಾ? ನಾನು ಎರಡು ಚಪ್ಪಲಿಗಳನ್ನು ತೋರಿಸುತ್ತೇನೆ. ನಿನಗಿಂತ ದೊಡ್ಡವನು ನಾನು. ನನ್ನ ಬಳಿಯೂ ಎರಡು ಚಪ್ಪಲಿಗಳಿವೆ ಹುಷಾರ್! ಎರಡು ಕೂಡ ಹರಿದಿವೆ ಎಂದು ಚಪ್ಪಲಿಗಳನ್ನು ಪ್ರದರ್ಶಿಸಿ ಪವನ್ ಕಲ್ಯಾಣ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದರು.

ಈ ಸುದ್ದಿ ಓದಿದ್ದೀರಾ? ‘ಬಿಜೆಪಿಗೆ ಮತ ಹಾಕದಿದ್ದರೆ ರಾಜ್ಯಕ್ಕೆ ಮೋದಿ ಆಶೀರ್ವಾದ ಸಿಗುವುದಿಲ್ಲ’ ಎಂಬ ಅರ್ಥ ಇದೇನಾ? ಅಕ್ಕಿ ಕಡಿತಕ್ಕೆ ಕಾಂಗ್ರೆಸ್ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ನಟ ಪವನ್ ಕಲ್ಯಾಣ್ ಕಾಕಿನಾಡದ ಕಥಿಪುಡಿಯ ಸಾರ್ವಜನಿಕ ಸಮಾರಂಭದಲ್ಲಿ ದ್ವೇಷದ ಭಾಷಣ ಮಾಡಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಮತ್ತು ಅವರ ಸರ್ಕಾರವನ್ನು ಟೀಕಿಸಿದ್ದರು. ಇದಕ್ಕೆ ಪರ್ನಿ ನಾನಿ ಅವರು ತಿರುಗೇಟು ನೀಡಿದ್ದು, ಪವನ್ ಅವರ ಇಬ್ಬಗೆಯ ಮಾತು ತುಂಬಾ ಅಪಾಯಕಾರಿ. ತಮ್ಮ ನಯವಾದ ಮಾತುಗಳಿಂದ ಅಮಾಯಕರನ್ನು ವಂಚಿಸುತ್ತಿದ್ದಾರೆ. ಪವನ್ ಕಲ್ಯಾಣ್ ಅವರು ಹಿಂದಿನ ಟಿಡಿಪಿ ಸರ್ಕಾರದ ಭಾಗವಾಗಿದ್ದರು ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂದು ಆರೋಪಿಸಿದ್ದಾರೆ.

“ಚಂದ್ರಬಾಬು ನಾಯ್ಡು ಮತ್ತು ಟಿಡಿಪಿಗಾಗಿ ಪವನ್ ಅವರು ಮತಯಾಚಿಸುತ್ತಿದ್ದಾರೆ. ಪವನ್ ಅವರ ಜನಸೇನಾ ಪಕ್ಷ ಮುಂದಿನ ಚುನಾವಣೆಯಲ್ಲಿ ಕೇವಲ 15 ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸಲಿದ್ದು, ಜನಸೇನಾ ಸರ್ಕಾರ ರಚಿಸುವ ಪ್ರಶ್ನೆ ಎಲ್ಲಿದೆ ಎಂದರು. ವೈಎಸ್‌ಆರ್‌ಸಿಪಿ ಸರ್ಕಾರವು ಮುಂದಿನ ಅವಧಿಯಲ್ಲೂ ಎಲ್ಲ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಿದೆ” ಎಂದು ನಾನಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...