ಬಾಲಿವುಡ್‌ ನಿರ್ದೇಶಕರಲ್ಲಿ ಬುದ್ಧಿಶಕ್ತಿಯ ಕೊರತೆ: ಅನುರಾಗ್‌ ಕಶ್ಯಪ್ ಲೇವಡಿ

Date:

ಬಾಲಿವುಡ್‌ನ ನಿರ್ದೇಶಕ ಹಾಗೂ ನಟ ಅನುರಾಗ್‌ ಕಶ್ಯಪ್‌ ಹಿಂದಿ ಚಿತ್ರ ನಿರ್ದೇಶಕರು ಹಾಗೂ ಬಾಲಿವುಡ್‌ ಚಿತ್ರೋದ್ಯಮದ ಬಗ್ಗೆ ಪುನಃ ಲೇವಡಿ ಮಾಡಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಹಿಂದಿ ಚಿತ್ರೋದ್ಯಮವನ್ನು ಆಡು ಮಾತಿನಲ್ಲಿ ಬಾಲಿವುಡ್‌ ಎನ್ನುತ್ತಾರೆ. ಪುಷ್ಪಾದಂತ ಸಿನಿಮಾವನ್ನು ತಯಾರಿಸುವಂತ ಬುದ್ಧಿಯನ್ನು ಬಾಲಿವುಡ್‌ ಹೊಂದಿಲ್ಲ ಎಂದು ತೆಗಳಿದರು.

“ಪ್ರಸ್ತುತ ಹಿಂದಿ ಚಿತ್ರೋದ್ಯಮ ಅಪಾಯಗಳನ್ನು ತೆಗೆದುಕೊಳ್ಳಲು ಮುಂದಾಗುತ್ತಿಲ್ಲ. ಅವರಿಗೆ ಏನೂ ಅರ್ಥವಾಗುತ್ತಿಲ್ಲ.ಅವರು ಪುಷ್ಪಾ-2ದಂತಹ ಸಿನಿಮಾವನ್ನು ನಿರ್ಮಿಸಲು ಆಗುವುದಿಲ್ಲ. ಅವರಿಗೆ ಸಾದ್ಯವಿಲ್ಲ, ಏಕೆಂದರೆ ಇಂತಹ ಸಿನಿಮಾಗಳನ್ನು ನಿರ್ಮಿಸಲು ಬುದ್ಧಿಶಕ್ತಿಯ ಕೊರತೆಯಿದೆ. ಸಿನಿಮಾ ನಿರ್ಮಾಣ ಏನು ಎನ್ನುವುದು ಅವರಿಗೆ ಅರ್ಥವಾಗುತ್ತಿಲ್ಲ. ಪುಷ್ಪಾ -2 ಸಿನಿಮಾವನ್ನು ಸುಕುಮಾರ್‌ ತರದವರು ಮಾತ್ರ ನಿರ್ಮಿಸಲು ಸಾಧ್ಯ. ದಕ್ಷಿಣದಲ್ಲಿ ಚಿತ್ರ ನಿರ್ದೇಶಕರಿಗಾಗಿ ಹೂಡಿಕೆ ಮಾಡುತ್ತಾರೆ ಹಾಗೂ ಸಿನಿಮಾಗಳನ್ನು ತಯಾರಿಸಲು ಅವರಿಗೆ ಸಂಪೂರ್ಣ ಅಧಿಕಾರ ನೀಡುತ್ತಾರೆ. ಬಾಲಿವುಡ್‌ನಲ್ಲಿ ಪ್ರತಿಯೊಬ್ಬರು ವಿಶ್ವವನ್ನು ನಿರ್ಮಿಸಲು ಬಯಸುತ್ತಾರೆ. ತಮ್ಮದೆ ಬ್ರಹ್ಮಾಂಡವನ್ನು ರಚಿಸಿಕೊಂಡಿರುವ ಅವರು ಸಿನಿಮಾ ನಿರ್ದೇಶಿಸಿದ ನಂತರ ಅಹಂಕಾರದಿಂದ ತಮ್ಮನ್ನೇ ದೇವರು ಎಂದು ಭಾವಿಸಿಕೊಳ್ಳುತ್ತಾರೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ಸುಕುಮಾರ್‌ ನಿರ್ದೇಶನದಲ್ಲಿ ಅಲ್ಲು ಅರ್ಜುನ್‌, ರಷ್ಮಿಕಾ ಮಂದಣ್ಣ ಮುಖ್ಯ ತಾರಾಗಣದಲ್ಲಿ ಬಿಡುಗಡೆಯಾಗಿರುವ ಪುಷ್ಪಾ 2 ವಿಶ್ವದಾದ್ಯಂತ ಸುಮಾರು 1760 ಕೋಟಿ ರೂ. ಗಳಿಗೆ ಮಾಡಿದ್ದು, ಚಿತ್ರಮಂದಿರಗಳಲ್ಲಿ ಇನ್ನು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದು ಭಾರತೀಯ ಚಿತ್ರರಂಗದಲ್ಲಿ ಮೂರನೇ ಹೆಚ್ಚು ಲಾಭ ಗಳಿಕೆ ಕಂಡ ಸಿನಿಮಾವಾಗಿದೆ.

ಇತ್ತೀಚಿಗೆ ಅನುರಾಗ್‌ ಕಶ್ಯಪ್‌ ನಿರ್ದೇಶಿಸಿದ ಬಾಲಿವುಡ್ ಚಿತ್ರ ‘ಕೆನಡಿ’ ಯನ್ನು ಬಿಡುಗಡೆ ಮಾಡಲು ಸಾಕಷ್ಟು ಚಿತ್ರಮಂದಿರಗಳು ಅವಕಾಶ ನೀಡಲಿಲ್ಲ. ಇದೇ ಸಿನಿಮಾ ಕಾನ್‌ ಚಿತ್ರೋತ್ಸವದಲ್ಲಿ ಮೆಚ್ಚುಗೆ ಗಳಿಸಿತು.

ಅನುರಾಗ್‌ ಕಶ್ಯಪ್‌ ಇತ್ತೀಚಿನ ದಿನಗಳಲ್ಲಿ ದಕ್ಷಿಣ ಚಿತ್ರರಂಗದತ್ತ ಮುಖ ಮಾಡಿದ್ದು, ಲಿಯೋ, ಮಹಾರಾಜ, ವಿಡುದಲೈ ಭಾಗ 2 ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...