ಹಠಾತ್ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್ ಪ್ರಶಸ್ತಿ ವಿಜೇತ ಎ ಆರ್ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸುತ್ತಿರುವುದಾಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಇತ್ತೀಚಿಗಷ್ಟೆ ವಿದೇಶದಿಂದ ವಾಪಸಾದ ನಂತರ ಕುತ್ತಿಗೆ ಭಾಗದಲ್ಲಿನ ನೋವು ಉಂಟಾದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ರೆಹಮಾನ್ ಅವರು ಬೇಗ ಚೇತರಿಸಿಕೊಳ್ಳಲೆಂದು ಅವರ ಅಭಿಮಾನಿಗಳು ಸಾಮಾಜಿಕ ಮಾಧ್ಯಮದ ಮೂಲಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಕೆಲ ವಾರಗಳ ಹಿಂದೆ ರೆಹಮಾನ್ ಅವರ ಪತ್ನಿ ಸಾಯಿರಾ ಬಾನು ಕೂಡ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದುಕೊಂಡಿದ್ದರು. ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ಲೈಂಗಿಕ ಕಾರ್ಯಕರ್ತೆಯ ನೋವು-ನಲಿವುಗಳ ಕಥೆ ‘ಅನೋರಾ’ಗೆ ಐದು ಆಸ್ಕರ್ ಪ್ರಶಸ್ತಿಗಳ ಗರಿ
ಸಾಯಿರಾ ಬಾನು ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ತುರ್ತು ಸಮಯದಲ್ಲಿಯೂ ಅವರು ಬೇಗನೆ ಚೇತರಿಸುಕೊಳ್ಳುವುದಕ್ಕೆ ಗಮನ ನೀಡುತ್ತಿದ್ದಾರೆ. ರೆಹಮಾನ್ ಅವರ ಆಪ್ತರು ಹಾಗೂ ಅಭಿಮಾನಿಗಳು ಸಾಯಿರಾ ಅವರು ಗುಣಮುಖರಾಗಲು ಬೆಂಬಲ ವ್ಯಕ್ತಪಡಿಸಿರುವುದಕ್ಕೆ ಸಾಯಿರಾ ಕೃತಜ್ಞತೆ ಸಲ್ಲಿಸಿರುವುದಾಗಿ ಸಾಯಿರಾ ಅವರ ವಕೀಲರಾದ ವಂದನಾ ಶಿವ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದರು.
ಎ ಆರ್ ರೆಹಮಾನ್ ಅವರು ಸಾಯಿರಾ ಅವರನ್ನು 1995ರಲ್ಲಿ ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ. ರೆಹಮಾನ್ ಅವರು ಹಲವು ಭಾಷೆಯ ನೂರಾರು ಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿದ್ದಾರೆ. 2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಚಿತ್ರದ ಸಂಗೀತ ನಿರ್ದೇಶನಕ್ಕಾಗಿ 2 ಆಸ್ಕರ್ ಪ್ರಶಸ್ತಿ ಲಭಿಸಿತ್ತು.
ರೆಹಮಾನ್ ಅವರು ನಿರ್ಲಜೀಕರಣದ ಪ್ರಯುಕ್ತ ಅವರು ಅನಾರೋಗ್ಯಕ್ಕೀಡಾಗಿದ್ದರು. ಚಿಕಿತ್ಸೆ ನೀಡಲಾಗಿದ್ದು, ಕೆಲವು ಪರೀಕ್ಷೆಗಳನ್ನು ನಡೆಸಲಾಗಿದೆ. ಅಭಿಮಾನಿಗಳ ಪ್ರಾರ್ಥನೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಪುತ್ರ ಅಮೀನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಸದ್ಯ ರೆಹಮಾನ್ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.





