ದಾಂಪತ್ಯದಲ್ಲಿ ಬಿರುಕು; ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದ ಎ ಆರ್‌ ರೆಹಮಾನ್‌

Date:

ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ.

ಸಾಯಿರಾ ಅವರ ವಕೀಲ ವಂದನಾ ಶಾ ಅವರು, ದಂಪತಿಯ ವಿಚ್ಛೇದನ ನಿರ್ಧಾರದ ಬಗ್ಗೆ ಅಧಿಕೃತವಾಗಿ ತಿಳಿಸಿದ್ದಾರೆ. ಎ.ಆರ್.ರೆಹಮಾನ್ ಅವರು 1995 ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.

ಮದುವೆಯಾದ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ಎ.ಆರ್.ರೆಹಮಾನ್ ಅವರಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಹೇಳಿಕೊಂಡಿದ್ದಾರೆ. ಸಾಯಿರಾ ಅವರು ನೋವು ಮತ್ತು ಸಂಕಟದಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವಕೀಲರಾದ ವಂದನಾ ಶಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಕೀರ್ತಿಶನಿ’ಯನ್ನು ಮ್ಯಾನೇಜ್ ಮಾಡಲಾಗದೆ ಎದ್ದು ಹೋದರೆ ಗುರುಪ್ರಸಾದ್?

ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿರುವುದನ್ನು ದಂಪತಿ ಕಂಡುಕೊಂಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಇಬ್ಬರ ಪೈಕಿ ಯಾರೂ ಕೂಡ ರಾಜಿಯಾಗಲು ಸಾಧ್ಯವಿಲ್ಲ ಎಂಬ ಭಾವನೆಯನ್ನು ಹೊಂದಿರುತ್ತಾರೆ. ಆದ್ದರಿಂದ ಸಾಯಿರಾ ಬಾನು ಮತ್ತು ಅವರ ಪತಿ ಎ ಆರ್ ರೆಹಮಾನ್ ಅವರು ಅತ್ಯಂತ ನೋವು ಮತ್ತು ವಿಷಾದ ಭಾವದಿಂದಲೇ ವಿಚ್ಛೇದನ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. 

ಪತ್ನಿ ಕಡೆಯಿಂದ ವಿಚ್ಚೇದನ ಪ್ರಕಟಣೆ ಬಂದ ನಂತರ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಎ ಆರ್ ರೆಹಮಾನ್, “ನಾವು 30 ವರ್ಷದ ಸಂಭ್ರಮವನ್ನು ಆಚರಿಸುತ್ತೇವೆ ಎಂಬ ಭರವಸೆಯಿತ್ತು. ಆದರೆ ಎಲ್ಲ ವಿಷಯಗಳು ಕಾಣದ ಅಂತ್ಯವನ್ನು ಹೊಂದಿವೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವು ನಡುಗಬಹುದು. ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದು ತಿಳಿದಿದ್ದರೂ ಈ ಬಿರುಕಿನಲ್ಲಿ ನಾವು ಅರ್ಥವನ್ನು ಹುಡುಕುತ್ತೇವೆ. ನಮ್ಮ ಈ ದುರ್ಬಲ ಕ್ಷಣಗಳಲ್ಲಿ ಸಾಗುವಾಗ ನಿಮ್ಮ ದಯೆ ಇರಲಿ ಮತ್ತು ನಮ್ಮ ಗೌಪ್ಯತೆಯನ್ನು ಗೌರವಿಸಿದ್ದಕ್ಕಾಗಿ ಸ್ನೇಹಿತರಾದ ನಿಮಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...