ಬೆಂಗಳೂರು | ಹುಲಿ ಉಗುರು ಪ್ರಕರಣ; ನಟ ಜಗ್ಗೇಶ್‌ಗೆ ರಿಲೀಫ್‌

Date:

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ ಜಗ್ಗೇಶ್‌ ವಿರುದ್ಧ ಅರಣ್ಯಾಧಿಕಾರಿಗಳು ಹೊರಡಿಸಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ನಟ ಜಗ್ಗೇಶ್‌ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್​​ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಬಂಧನವಾಗುತ್ತಿದ್ದಂತೆ, ಈ ಪ್ರಕರಣದಲ್ಲಿ ಜಗ್ಗೇಶ್ ಸಹ ಸಿಲುಕಿಕೊಂಡಿದ್ದರು. ನಟನ​​​ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ಈ ಕ್ರಮವನ್ನು ಪ್ರಶ್ನೀಸಿ ನಟ ಜಗ್ಗೇಶ್‌ ಕೋರ್ಟ್​​ ಮೊರೆ ಹೋಗಿದ್ದರು.

ನಟ ಜಗ್ಗೇಶ್ ಅವರು 20ನೇ ವಯಸ್ಸಿನಲ್ಲಿದ್ದಾಗ ಅವರ ತಾಯಿ ಹುಲಿಯ ಉಗುರಿನ ಪೆಂಡೆಂಟ್​ನ ಗಿಫ್ಟ್ ಆಗಿ ನೀಡಿದ್ದರು. ಇದು ಜಗ್ಗೇಶ್ ಕೊರಳಲ್ಲೇ ಇತ್ತು. ಈ ಬಗ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದರು. ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಿದ ಬಳಿಕ ಜಗ್ಗೇಶ್ ಬಳಿಯೂ ಹುಲಿ ಉಗುರು ಇದೆ ಎನ್ನುವ ವಿಚಾರ ಮುನ್ನೆಲೆಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್​ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್​ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್​ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್​ಗೆ ಹೈಕೋರ್ಟ್ ತಡೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...