ಬೆಂಗಳೂರು | ‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ

Date:

ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿ ನಟಿ ಶ್ರುತಿ ಅವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ನಟಿ ಶ್ರುತಿ ಅವರ ಪತಿಯೇ ಅವರಿಗೆ ಚಾಕು ಇರಿದಿದ್ದಾರೆ ಎನ್ನಲಾಗುತ್ತಿದೆ. ಪತ್ನಿಯ ಬಗ್ಗೆ ಅನುಮಾನಿಸಿದ ಪತಿ ಅಮರೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಇದೀಗ ಶ್ರುತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶ್ರುತಿ ಅವರ ಪತಿ ಅಮರೇಶ್ ಅವರನ್ನು ಬಂಧಿಸಿದ್ದಾರೆ.

‘ಅಮೃತಧಾರೆ’ ಸೇರಿದಂತೆ ಕನ್ನಡದ ಇನ್ನೂ ಕೆಲವು ಧಾರಾವಾಹಿಗಳಲ್ಲಿ ನಟಿ ಶ್ರುತಿ ನಟಿಸಿದ್ದಾರೆ. ಶ್ರುತಿ ಮತ್ತು ಅಮರೇಶ್ ನಡುವೆ ಮೊದಲಿನಿಂದಲೂ ಮನಸ್ತಾಪಗಳಿದ್ದವು. ಶ್ರುತಿ ಹಾಗೂ ಅಮರೇಶ್ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಇಬ್ಬರು ಮಕ್ಕಳು ಸಹ ಈ ದಂಪತಿಗೆ ಇದ್ದಾರೆ. ಹನುಮಂತ ನಗರದಲ್ಲಿ ದಂಪತಿ ವಾಸವಿದ್ದರು. ಆದರೆ ಪತ್ನಿಯ ಬಗ್ಗೆ ಅಮರೇಶ್​ಗೆ ಅನುಮಾನಗಳಿದ್ದು, ಇದೇ ಕಾರಣಕ್ಕೆ ಪದೇ-ಪದೇ ಜಗಳಗಳು ನಡೆಯುತ್ತಿದ್ದವು.

ಇದನ್ನು ಓದಿದ್ದೀರಾ? ತಮಿಳು ನಾಡು ಚುನಾವಣೆ: ಟಿವಿಕೆ ಪಕ್ಷದಿಂದ ವಿಜಯ್‌ ಸಿಎಂ ಅಭ್ಯರ್ಥಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ಏಪ್ರಿಲ್ ತಿಂಗಳಲ್ಲಿ ಶ್ರುತಿ, ಅಮರೇಶ್ ಇಂದ ದೂರಾಗಿ ತಮ್ಮ ಅಣ್ಣನ ಮನೆಗೆ ಬಂದಿದ್ದರು. ಅಲ್ಲಿಯೇ ವಾಸವಿದ್ದರು. ಆದರೆ ಅದಾದ ಬಳಿಕವೂ ಸಹ ಮನೆಯ ಭೋಗ್ಯದ ಹಣದ ಕುರಿತಾಗಿ ಜಗಳ ನಡೆದಿತ್ತು. ಇದರ ಕುರಿತಾಗಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಬಳಿಕ ರಾಜಿ-ಸಂಧಾನ ನಡೆದು ನಿನ್ನೆಯಷ್ಟೆ (ಗುರುವಾರ) ಇಬ್ಬರೂ ಮತ್ತೆ ಒಟ್ಟಿಗೆ ನೆಲೆಸಲು ಒಪ್ಪಿದ್ದರು. ಮುನೇಶ್ವರ ಲೇಔಟ್​ನ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ ರಾಜಿ-ಸಂಧಾನ ನಡೆದ ಮಾರನೇಯ ದಿನವೇ ಅಂದರೆ ಇಂದು ಅಮರೇಶ್, ಶ್ರುತಿಗೆ ಚಾಕು ಇರಿದಿದ್ದಾನೆ.

ಮೊದಲು ಶ್ರುತಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದ ಅಮರೇಶ್ ಆ ನಂತರ ಚಾಕುವಿನಿಂದ ಶ್ರುತಿಯ ಹೊಟ್ಟೆ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಶ್ರುತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಮರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...