ರೇವ್​ ಪಾರ್ಟಿ ಪ್ರಕರಣ | ಜೂನ್ 14ರ ತನಕ ತೆಲುಗು ನಟಿ ಹೇಮಾಗೆ ನ್ಯಾಯಾಂಗ ಬಂಧನ

Date:

ರೇವ್​ ಪಾರ್ಟಿ ಮಾಡಿದ ಆರೋಪದಲ್ಲಿ ಸಿಕ್ಕಿಬಿದ್ದಿರುವ ತೆಲುಗು ನಟಿ ಹೇಮಾ ಅವರನ್ನು ಇಂದು (ಜೂನ್​ 3) ಸಿಸಿಬಿ ಪೊಲೀಸರು ಬಂಧಿಸಿದ್ದರು.

ಆನೇಕಲ್​​ನ 4ನೇ ಹೆಚ್ಚುವರಿ ಸಿವಿಲ್ ಜೆಎಂಎಫ್​ಸಿ ನ್ಯಾಯಾಲಯದ ಜಡ್ಜ್​ ಸಲ್ಮಾ ಎ.ಎಸ್. ಎದುರು ಹೇಮಾರನ್ನು ಹಾಜರುಪಡಿಸಲಾಗಿತ್ತು. ನಟಿಗೆ ಜೂನ್ 14ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹೈದರಾಬಾದ್​ನಿಂದ ಬೆಂಗಳೂರಿಗೆ ಬಂದು ಎಲೆಕ್ಟ್ರಾನಿಕ್​ ಸಿಟಿಯ ಜೆ.ಆರ್​. ಫಾರ್ಮ್​ಹೌಸ್​ನಲ್ಲಿ ರೇವ್​ ಪಾರ್ಟಿ ಮಾಡಿದ ಆರೋಪ ಹೇಮಾ ಅವರ ಮೇಲಿದೆ. ಈ ಪ್ರಕರಣದಲ್ಲಿ ಅವರು ಜೈಲು ಪಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೇಮಾ ಅವರು ಪಾರ್ಟಿ ನಡೆದ ಸ್ಥಳದಲ್ಲಿ ಇದ್ದರು ಎಂಬುದನ್ನು ಬೆಂಗಳೂರು ಪೊಲೀಸರು ಖಚಿತ ಪಡಿಸಿದ್ದಾರೆ. ಆದರೆ ತಾನು ಅಲ್ಲಿ ಇರಲೇ ಇಲ್ಲ ಎಂದು ಹೇಮಾ ವಾದಿಸುತ್ತಲೇ ಬರುತ್ತಿದ್ದಾರೆ. ಇಂದು ಕೂಡ ಅವರು ಅದೇ ಮಾತನ್ನು ಹೇಳಿದ್ದಾರೆ. ಮಾಧ್ಯಮಗಳ ಎದುರು ಕೂಗಾಡಿದ್ದಾರೆ.

ಇತ್ತೀಚೆಗೆ ಜೆ.ಆರ್​. ಫಾರ್ಮ್​ಹೌಸ್​ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದಾಗ ಹೇಮಾ ಸಿಕ್ಕಿಬಿದ್ದಿದ್ದರು. ಆ ಸುದ್ದಿ ಹೊರಬೀಳುತ್ತಿದ್ದಂತೆಯೇ ಅದೇ ಫಾರ್ಮ್​ಹೌಸ್​ನ ಆವರಣದಿಂದ ವಿಡಿಯೋ ಮಾಡಿ ಸೋಶಿಯಲ್​ ಮೀಡಿಯಾದಲ್ಲಿ ಹರಿಬಿಟ್ಟು ತಾವು ಹೈದರಾಬಾದ್​ನಲ್ಲಿ ಇರುವುದಾಗಿ ಬಿಂಬಿಸಲು ಹೇಮಾ ಪ್ರಯತ್ನಿಸಿದ್ದರು.

ಬೆಂಗಳೂರಲ್ಲಿ ಹೇಮಾ ಅವರನ್ನು ಬಂಧಿಸಿದ ಬಳಿಕ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಅವರ ಮೆಡಿಕಲ್​ ಟೆಸ್ಟ್​ ಮಾಡಿಸಲಾಗಿದೆ. ರಕ್ತ, ಮೂತ್ರ, ಕೂದಲು, ಉಗುರಿನ ಸ್ಯಾಂಪಲ್​ ಪಡೆಯಲಾಗಿದೆ. ಫಾರ್ಮ್​​ಹೌಸ್​ ಮೇಲೆ ದಾಳಿ ನಡೆದ ದಿನವೂ ಹೇಮಾ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ ಅವರು ಡ್ರಗ್ಸ್​ ಸೇವಿಸಿರುವುದು ಖಚಿತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಬಳಿಕ ವಿಚಾರಣೆಗೆ ಹಾಜರಾಗುವಂತೆ ಅವರಿಗೆ 2 ಬಾರಿ ನೋಟಿಸ್​ ನೀಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಹೇಮಾಗೆ ಸಿಸಿಬಿ ನೋಟಿಸ್ ನೀಡಿದ್ದರಿಂದ ಅದರಂತೆ ಇಂದು ಬುರ್ಖಾ ಧರಿಸಿದ್ದ ಬಂದಿದ್ದ ಹೇಮಾ, ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನಲೆಯಲ್ಲಿ ನಟಿಯನ್ನು ಬಂಧಿಸಿದ್ದಾರೆ.

ಮಾಧ್ಯಮಗಳ ಮೇಲೆ ಕೂಗಾಡಿದ ನಟಿ

ಬಂಧನದ ಬಳಿಕ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆತರಲಾಗಿತ್ತು. ವೈದ್ಯಕೀಯ ಪರೀಕ್ಷೆ ಬಳಿಕ ಆಸ್ಪತ್ರೆಯಿಂದ ಹೊರಬರುವಾಗ ಮಾಧ್ಯಮಗಳ ಕ್ಯಾಮೆರಾ ನೋಡಿದ ನಟಿ, ಮಾಧ್ಯಮಗಳ ವಿರುದ್ಧ ಕೂಗಾಡಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಗಳು ಬಾಯಿ ಮುಚ್ಚಿಸಲು ಯತ್ನಿಸಿದರಾದರೂ, ಅವರು ಸುಮ್ಮನಾಗಲಿಲ್ಲ.

HEMA TELUGU

“ನಿಮ್ಮ ಸುದ್ದಿಯೆಲ್ಲ ತಪ್ಪು. ನನ್ನನ್ನು ಈಗಷ್ಟೇ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಈಗ ನನ್ನ ಕೂದಲು, ಉಗುರು, ಮೂತ್ರ, ರಕ್ತದ ಮಾದರಿ ತೆಗೆದುಕೊಂಡಿದ್ದಾರೆ. ಅದರಲ್ಲಿ ಪಾಸಿಟಿವ್​ ಬರತ್ತೋ, ನೆಗೆಟಿವ್​ ಬರತ್ತೋ ಅನ್ನೋದೆಲ್ಲ ಆಮೇಲೆ. ಅರ್ಥ ಆಯ್ತಾ? ನೀವು ತೋರಿಸುತ್ತಿರುವ ಸುದ್ದಿಯೆಲ್ಲ ಸುಳ್ಳು. ಇದು ನೀವು ಮಾಡುವ ಕೆಲಸ’ ಎಂದು ಮಾಧ್ಯಮಗಳ ಎದುರು ನಟಿ ಹೇಮಾ ತೆಲುಗಿನಲ್ಲೇ ಕೂಗಾಡಿದ್ದಾರೆ. ಸದ್ಯ ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...