ಬೆಂಗಳೂರು ಚಿತ್ರೋತ್ಸವ | ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ಶಬಾನಾ ಅಝ್ಮಿ ಭಾಜನ

Date:

2024-25ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೀಡಲಾಗುವ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಭಾರತೀಯ ಖ್ಯಾತ ಚಲನಚಿತ್ರ ನಟಿ ಶಬಾನಾ ಅಝ್ಮಿ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿ ಆದೇಶಿಸಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿ ಸಭೆ ಸೇರಿ ಶಬಾನಾ ಅಝ್ಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿ ಶಿಫಾರಸ್ಸು ಮಾಡಿದೆ.

ಹೆಸರಾಂತ ಚಲನಚಿತ್ರ ನಟಿ ಶಬಾನಾ ಅಝ್ಮಿ ಅವರನ್ನು ಜೀವಮಾನದ ಸಾಧನೆಗಾಗಿ ರಾಜ್ಯ ಸರ್ಕಾರ ಅವಿರೋಧವಾಗಿ ಆಯ್ಕೆ ಮಾಡಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪದ ದಿನವಾದ ಇಂದು (ಮಾರ್ಚ್ 8) ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಟಿ ಶಬಾನಾ ಅಝ್ಮಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‌. ವಾರ್ತಾ ಮತ್ತು ಸಾರ್ವಜನಿಕ ಸಪರ್ಕ ಇಲಾಖೆಯ ಸುಲೋಚನಾ ಸಭಾಂಗಣದಲ್ಲಿ ಸಂಜೆ.6.30ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಿದೆ.

ಸಂಕ್ಷಿಪ್ತ ಪರಿಚಯ

1950 ಸೆಪ್ಟೆಂಬರ್ 18ರಂದು ಜನಿಸಿರುವ ಶಬಾನಾ ಅಝ್ಮಿ ಭಾರತೀಯ ಚಲನಚಿತ್ರ, ದೂರದರ್ಶನ ಹಾಗೂ ರಂಗಭೂಮಿ ನಟಿ. ಹಿಂದಿ ಚಲನಚಿತ್ರೋದ್ಯಮದಲ್ಲಿ ಅವರು 160ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಭಾರತದ ಅತ್ಯಂತ ಮೆಚ್ಚುಗೆ ಪಡೆದ ನಟಿಯರಲ್ಲಿ ಒಬ್ಬರಾದ ಅಝ್ಮಿ ಹಲವಾರು ಪ್ರಕಾರಗಳಲ್ಲಿ ನಟಿಸಿ ಮಹಿಳಾ ಪಾತ್ರಗಳಿಗೆ ಜೀವತುಂಬಿ ಹೆಸರುವಾಸಿಯಾಗಿದ್ದಾರೆ.

ಐದು ಫಿಲ್ಮ್‌ಫೇರ್ ಪ್ರಶಸ್ತಿಗಳು ಮತ್ತು ಹಲವಾರು ಅಂತಾರಾಷ್ಟ್ರೀಯ ಪುರಸ್ಕಾರ ಜೊತೆಗೆ ಐದು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಶಬಾನಾ ಅಝ್ಮಿ ಅವರಿಗೆ ಸಂದಿವೆ. ಭಾರತ ಸರ್ಕಾರವು 1998ರಲ್ಲಿ ಪದ್ಮಶ್ರೀ ಮತ್ತು 2012ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...