ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕಾಸರವಳ್ಳಿ, ಜಯಮಾಲ, ಬಾಬು ಅವರಿಗೆ ‘ಸುವರ್ಣ’ ಗರಿ

Date:

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಬಿಫ್ಸ್‌) ಸಮಾರೋಪದ ದಿನವಾದ ಶುಕ್ರವಾರ, ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳನ್ನು ಪೂರೈಸಿ ಅಪಾರ ಕೊಡುಗೆ ನೀಡಿದ ಗಣ್ಯರನ್ನು ‘ಸುವರ್ಣ ಸಂಭ್ರಮ’ ಕಾರ್ಯಕ್ರಮದಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

​ಖ್ಯಾತ ನಿರ್ದೇಶಕ ಪದ್ಮಶ್ರೀ ಗಿರೀಶ್ ಕಾಸರವಳ್ಳಿ, ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಹಾಗೂ ಹಿರಿಯ ನಟಿ, ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ ಅವರಿಗೆ ವೇದಿಕೆಯಲ್ಲಿ ಗೌರವ ಸಲ್ಲಿಸಲಾಯಿತು. ಇದೇ ವೇಳೆ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರ ಪರವಾಗಿ ಪುತ್ರಿ ಪೂರ್ಣಿಮಾ ರಾಮ್‌ಕುಮಾರ್ ಹಾಗೂ ಛಾಯಾಗ್ರಾಹಕ ಎಸ್. ರಾಮಚಂದ್ರ ಅವರ ಪರವಾಗಿ ಸಹೋದರ ಶಂಕರ್ ಐತಾಳ್ ಸನ್ಮಾನ ಸ್ವೀಕರಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು, ಡಾ. ರಾಜ್‌ಕುಮಾರ್ ಹಾಗೂ ಪಾರ್ವತಮ್ಮನವರ ಅನುಪಸ್ಥಿತಿಯಲ್ಲಿ ಚಿತ್ರರಂಗ ಎದುರಿಸುತ್ತಿರುವ ನಾಯಕತ್ವದ ಕೊರತೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ಚಿತ್ರರಂಗಕ್ಕೆ ಯಾವುದೇ ಸಮಸ್ಯೆ ಎದುರಾದರೂ ಡಾ. ರಾಜ್‌ಕುಮಾರ್ ಕೆ.ಜಿ. ರಸ್ತೆಗೆ ಬರುತ್ತಿದ್ದರು. ಅವರು ಬಂದರೆ ಜನಸಾಗರವನ್ನು ತಡೆಯುವುದು ಕಷ್ಟ ಎಂದು ಪೊಲೀಸ್ ಆಯುಕ್ತರೇ ಹೇಳುತ್ತಿದ್ದರು. ಅಂತಹ ಶಕ್ತಿ ಅವರಲ್ಲಿತ್ತು. ಆದರೆ ಇಂದು ನಾಯಕರಿಲ್ಲದೆ ಚಿತ್ರರಂಗ ಅತಂತ್ರ ಸ್ಥಿತಿಯಲ್ಲಿದೆ,” ಎಂದು ವಿಷಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​”ಹಿಂದೆ ಪಾರ್ವತಮ್ಮನವರು ಕಾದಂಬರಿ ಆಧಾರಿತ ಚಿತ್ರಗಳಿಗೆ ಒತ್ತು ನೀಡುತ್ತಿದ್ದರು. ಆದರೆ ಇಂದು ನಾಯಕ ನಟರು ಕಾದಂಬರಿಗಳನ್ನು ಪರಿಗಣಿಸುತ್ತಿಲ್ಲ. ಮಣ್ಣಿನ ವಾಸನೆ, ಸಂಸ್ಕೃತಿ ಬಿಂಬಿಸುವ ಕಥೆಗಳ ಕೊರತೆಯಿಂದಾಗಿ ಪ್ರೇಕ್ಷಕರು ಚಿತ್ರಮಂದಿರಗಳಿಂದ ದೂರ ಉಳಿಯುವಂತಾಗಿದೆ,” ಎಂದು ಪ್ರಸ್ತುತ ಚಿತ್ರರಂಗದ ನಡೆಗೆ ಕನ್ನಡಿ ಹಿಡಿದರು. ಅಲ್ಲದೇ, ಜಿಲ್ಲಾ ಮಟ್ಟದಲ್ಲಿ ಚಿತ್ರೋತ್ಸವ ವಿಸ್ತರಣೆ ಮತ್ತು ಅಕಾಡೆಮಿಗೆ ಪ್ರತ್ಯೇಕ ನಿರ್ದೇಶನಾಲಯದ ಅಗತ್ಯವನ್ನು ಪ್ರತಿಪಾದಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜನಪ್ರತಿನಿಧಿಗಳ ಘನತೆ ಇಲ್ಲದ ಮಾತಿಗೆ ಲಗಾಮು ಬೀಳಬೇಕು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ. ಜಯಮಾಲ ಮಾತನಾಡಿ, “ನಿರ್ಮಾಪಕರು ಸಂಕಷ್ಟದಲ್ಲಿದ್ದು, ಸರ್ಕಾರ ನೀಡುತ್ತಿರುವ ಸಬ್ಸಿಡಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಯಶಸ್ವಿನಿ ಯೋಜನೆಯನ್ನು ಚಿತ್ರರಂಗಕ್ಕೂ ವಿಸ್ತರಿಸಬೇಕು ಮತ್ತು ಚಿತ್ರರಂಗಕ್ಕೆ ಶೀಘ್ರವೇ ಉದ್ಯಮದ ಸ್ಥಾನಮಾನ ನೀಡಬೇಕು,” ಎಂದು ಒತ್ತಾಯಿಸಿದರು. ಅಲ್ಲದೆ, ಫಿಲ್ಮ್ ಸಿಟಿ ನಿರ್ಮಾಣದ ಜೊತೆಗೆ ಕಲಾವಿದರು ಮತ್ತು ತಂತ್ರಜ್ಞರಿಗೆ ವಸತಿಗಾಗಿ ಜಾಗ ಮೀಸಲಿಡುವಂತೆ ಮನವಿ ಮಾಡಿದರು.

Bangalore film fest 1

ತಮ್ಮ ಎಂಟು ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ್ದ ಎಸ್. ರಾಮಚಂದ್ರ ಅವರನ್ನು ಸ್ಮರಿಸಿದ ಗಿರೀಶ್ ಕಾಸರವಳ್ಳಿ, “ರಾಮಚಂದ್ರ ಅವರು ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದರು. ನಿರ್ದೇಶಕರ ಮಾಧ್ಯಮ ಇದಾಗಿದ್ದರೂ, ತಮಗೆ ಸರಿ ಎನಿಸದಿದ್ದನ್ನು ನೇರವಾಗಿ ಹೇಳುವ ಎದೆಗಾರಿಕೆ ಅವರಲ್ಲಿತ್ತು,” ಎಂದು ತಿಳಿಸಿದರು.

​ಪೂರ್ಣಿಮಾ ರಾಮ್‌ಕುಮಾರ್ ಮಾತನಾಡಿ, ವಜ್ರೇಶ್ವರಿ ಕಂಬೈನ್ಸ್ ಯಶಸ್ಸಿನ ಹಿಂದೆ ಚಿ. ಉದಯಶಂಕರ್, ದೊರೈ-ಭಗವಾನ್ ಸೇರಿದಂತೆ ಅನೇಕ ಗಣ್ಯರ ಶ್ರಮವಿದೆ ಎಂದು ಸ್ಮರಿಸಿದರು.

​ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು, ಚಿತ್ರರಂಗದ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. ಚಲನಚಿತ್ರ ಅಕಾಡೆಮಿ ಪರವಾಗಿ ಡಾ. ಸಾಧು ಕೋಕಿಲ ಗಣ್ಯರನ್ನು ಸ್ವಾಗತಿಸಿದರು. ಹಿರಿಯ ಪತ್ರಕರ್ತ ಗಂಗಾಧರ್ ಮೊದಲಿಯಾರ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...