ಕನ್ನಡ ಬಿಗ್‌ ಬಾಸ್‌ 12ರ ಆವೃತ್ತಿಗೆ ಯಾರು ನಿರೂಪಣೆ; ವಾಹಿನಿಯಿಂದ ಅಚ್ಚರಿಯ ನಿರ್ಧಾರ ಪ್ರಕಟ

Date:

ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ 11 ಆವೃತ್ತಿಗಳನ್ನು ಯಶಸ್ವಿಯಾಗಿ ಪೂರೈಸಿ, ಇದೀಗ 12ನೇ ಆವೃತ್ತಿಗೆ ಕಾಲಿಡುವ ಸನಿಹದಲ್ಲಿದೆ. ಈ ಸಂದರ್ಭದಲ್ಲಿ ‘ಕಲರ್ಸ್ ಕನ್ನಡ’ ವಾಹಿನಿ ನಿರೂಪಕರ ಬಗ್ಗೆ ಅಚ್ಚರಿಯ ನಿರ್ಧಾರ ಕೈಗೊಂಡಿದೆ.

ನಟ ಕಿಚ್ಚ ಸುದೀಪ್ ಅವರೇ 12ನೇ ಆವೃತ್ತಿಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.

11ನೇ ಆವೃತ್ತಿ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಕಾದು ನೋಡಿ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದರು. ಇದೀಗ ಮತ್ತೆ 12ನೇ ಆವೃತ್ತಿ ನಡೆಸಿಕೊಡುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಕಿಚ್ಚ ಸುದೀಪ್ ಅವರನ್ನು ನೋಡುವ ಸಲುವಾಗಿಯೇ ವಾರಾಂತ್ಯದಲ್ಲಿ ಅಭಿಮಾನಿಗಳು ಟಿವಿ ಎದುರು ಕೂರುತ್ತಾರೆ. ಸುದೀಪ್ ಇಲ್ಲದೇ ಇದ್ದರೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ಹೆಚ್ಚು ಜನಪ್ರಿಯ ಪಡೆಯುವುದು ಸಾಧ್ಯವಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ಹರಿದಾಡಿದ್ದವು.

ಆದರೆ ಈಗ ಸುದೀಪ್ ಅವರೇ ನಿರೂಪಣೆ ಮಾಡಲು ಒಪ್ಪಿಕೊಂಡಿರುವುದು ವೀಕ್ಷಕರಿಗೆ ಖುಷಿ ತಂದಿದೆ ಎನ್ನಲಾಗಿದೆ. ಸುದೀಪ್ ಇಲ್ಲಿಯವರೆಗೂ ಸತತವಾಗಿ 11 ಆವೃತ್ತಿಗಳನ್ನು ನಡೆಸಿಕೊಟ್ಟಿದ್ದಾರೆ. ಈಗ 12ನೇ ಆವೃತ್ತಿಗೂ ಅವರೇ ನಿರೂಪಣೆ ಮಾಡಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...