ಬಿಗ್​​ಬಾಸ್ 12ನೇ ಆವೃತ್ತಿಯ ಪ್ರಾರಂಭ ದಿನಾಂಕ ಘೋಷಿಸಿದ ನಟ ಸುದೀಪ್

Date:

ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್‌ನ 12ನೇ ಆವೃತ್ತಿಯ ದಿನಾಂಕವನ್ನು ಆಯೋಜಕ ನಟ ಸುದೀಪ್‌ ಘೋಷಿಸಿದ್ದಾರೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು ದಿನಾಂಕ ಘೋಷಣೆ ಮಾಡುವ ಮುಂಚೆಯೇ ಸುದೀಪ್ ಅವರು ಬಿಗ್​​ಬಾಸ್ ಸೀಸನ್ 12 ಪ್ರಾರಂಭವಾಗುವ ದಿನಾಂಕವನ್ನು ಘೋಷಣೆ ಮಾಡಿಬಿಟ್ಟಿದ್ದಾರೆ.

ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ಸುದೀಪ್ ಈ ಬಾರಿಯ ಬಿಗ್​​ಬಾಸ್ ಪ್ರಾರಂಭದ ದಿನಾಂಕ ಯಾವುದೆಂದು ಹೇಳಿದ್ದಾರೆ.

ಮೈಸೂರಿನಲ್ಲಿ ಇಂದು (ಆಗಸ್ಟ್ 31) ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬದ‌ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಇನ್ನೂ ಹಲವು ಗಣ್ಯರು ಭಾಗಿ ಆಗಿದ್ದರು. ಇದೇ ಕಾರ್ಯಕ್ರಮದಲ್ಲಿ ನಟ ಸುದೀಪ್ ಸಹ ಅತಿಥಿಯಾಗಿ ಭಾಗಿ ಆಗಿದ್ದರು. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಸುದೀಪ್ ಬಿಗ್​​ಬಾಸ್ ಬಗ್ಗೆಯೂ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಅಭಿಮಾನಿಗಳ ಕೂಗಾಟ, ಚಪ್ಪಾಳೆ, ಶಿಳ್ಳೆಗಳ ನಡುವೆ ಮಾತನಾಡಿದ ಸುದೀಪ್, ‘ಶೀಘ್ರವೇ ತೆರೆ ಮೇಲೆ ಬರಲಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಆಶೀರ್ವಾದ ಮಾಡಿ’ ಎಂದರು. ಆ ಮೂಲಕ ಬಿಗ್​​ಬಾಸ್ ಸೀಸನ್ 12 ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ ಎಂದು ಘೋಷಣೆ ಮಾಡಿದರು. ಈ ಬಾರಿಯೂ ಸುದೀಪ್ ಅವರೇ ಬಿಗ್​​ಬಾಸ್‌ನ ನಿರೂಪಣೆ ಮಾಡಲಿದ್ದು, ದಿನಾಂಕವನ್ನೂ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಳೆದ ಬಾರಿಯ ಬಿಗ್​​ಬಾಸ್ ಸೀಸನ್ 11 ಸೆಪ್ಟೆಂಬರ್ 29ರಂದು ಪ್ರಾರಂಭವಾಗಿತ್ತು. ಈ ಬಾರಿ ಸೆಪ್ಟೆಂಬರ್ 28ಕ್ಕೆ ಪ್ರಾರಂಭ ಆಗಲಿದೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆ ಆಗಿದ್ದು, ಕೆಲವರ ಆಯ್ಕೆಯಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ.

ಕಳೆದ ಸೀಸನ್ ನಿರೂಪಣೆ ಮಾಡುವಾಗ ತಾವು ಇನ್ನು ಮುಂದೆ ಬಿಗ್​​ಬಾಸ್ ನಿರೂಪಣೆ ಮಾಡುವುದಿಲ್ಲ ಇದೇ ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಆಯೋಜಕರು ಸುದೀಪ್ ಅವರ ಮನವೊಲಿಸುವಲ್ಲಿ ಸಫಲರಾಗಿದ್ದಾರೆ. ಆಯೋಜಕರ ಒತ್ತಡಕ್ಕೆ ಮಣಿದು ಸುದೀಪ್ ಅವರು ಬಿಗ್​​ಬಾಸ್ ನಿರೂಪಣೆಗೆ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...