ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಹೃದಯವಂತ ಶಾರುಖ್‌ ಖಾನ್‌

Date:

ಕ್ಯಾನ್ಸರ್‌ನಿಂದ ಬಳಲುತ್ತಿರುವ ಶಾರುಖ್‌ ಅಭಿಮಾನಿ

ಅಭಿಮಾನಿಯ ಚಿಕಿತ್ಸೆಗೆ ನೆರವಿನ ಹಸ್ತ ಚಾಚಿದ ನಟ

ಸಾವು ಬದುಕಿನ ನಡುವೆ ಹೋರಾಡುತ್ತಿರುವ ತಮ್ಮ ಅಭಿಮಾನಿಯೊಬ್ಬರ ಕೊನೆಯ ಆಸೆಯನ್ನು ಈಡೇರಿಸುವ ಮೂಲಕ ಬಾಲಿವುಡ್‌ನ ಖ್ಯಾತ ನಟ ಶಾರುಖ್‌ ಖಾನ್‌ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾನ್ಸರ್‌ನಿಂದ ಬಳಲುತ್ತಿರುವ ಕೊಲ್ಕತ್ತಾ ಮೂಲದ 60 ವರ್ಷದ ಶಿವಾನಿ ಎಂಬುವವರು ತಮ್ಮ ಕುಟುಂಬಸ್ಥರ ಬಳಿ ನೆಚ್ಚಿನ ನಟ ಶಾರುಖ್‌ ಖಾನ್‌ ಅವರನ್ನು ಭೇಟಿಯಾಗುವ ಬಯಕೆಯನ್ನು ಹಂಚಿಕೊಂಡಿದ್ದರು. ಶಿವಾನಿ ಅವರ ಪುತ್ರಿ ಪ್ರಿಯಾ ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಶಾರುಖ್‌ ಅಭಿಮಾನಿಗಳ ಗಮನಕ್ಕೆ ತಂದಿದ್ದಾರೆ.

ಅಭಿಮಾನಿಗಳ ಬಳಗದಲ್ಲಿ ಒಬ್ಬರಾದ ಫೈಜಿ ಎಂಬುವವರು ಶಿವಾನಿ ಅವರ ಕೊನೆಯ ಆಸೆಯ ಬಗ್ಗೆ ಶಾರುಖ್‌ ಖಾನ್‌ ಅವರಿಗೆ ತಿಳಿಸಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಶಾರುಖ್‌, ವಿಷಯ ತಿಳಿದ ಕೂಡಲೇ ಬಿಡುವು ಮಾಡಿಕೊಂಡು ತಮ್ಮ ಅಭಿಮಾನಿ ಶಿವಾನಿ ಅವರಿಗೆ ವಿಡಿಯೋ ಕಾಲ್‌ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಿವಾನಿ ಮತ್ತು ಅವರ ಪುತ್ರಿ ಪ್ರಿಯಾ ಜೊತೆಗೆ ಅರ್ಧ ಗಂಟೆಗಳ ಕಾಲ ಮಾತನಾಡಿರುವ ಸ್ಟಾರ್‌ ನಟ, ಚಿಕಿತ್ಸೆಗೆ ಅಗತ್ಯ ನೆರವು ಒದಗಿಸುವ ಭರವಸೆ ನೀಡಿದ್ದಾರೆ. ಕೊಲ್ಕತ್ತಾಗೆ ಭೇಟಿ ನೀಡಿದಾಗ ಖಂಡಿತವಾಗಿ ಶಿವಾನಿ ಅವರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಿಯಾ ಅವರ ಮದುವೆಗೆ ಹಾಜರಾಗುವುದಾಗಿಯೂ ಮಾತು ಕೊಟ್ಟಿದ್ದಾರೆ.

ತಮ್ಮ ನೆಚ್ಚಿನ ನಟನ ಜೊತೆ ಮಾತನಾಡಿದ ಅನುಭವವನ್ನು ಸೆಲ್ಫೀ ವಿಡಿಯೋ ಮೂಲಕ ಹಂಚಿಕೊಂಡಿರುವ ಶಿವಾನಿ, “ಶಾರುಖ್‌ ಖಾನ್‌ ನಮಗೆ ವಿಡಿಯೋ ಕರೆ ಮಾಡುತ್ತಾರೆಂದು ನಿಜಕ್ಕೂ ನಿರೀಕ್ಷಿಸಿರಲಿಲ್ಲ. ಅವರ ಜೊತೆ ಮಾತನಾಡಿ ಬಹಳ ಖುಷಿಯಾಗಿದೆ” ಎಂದಿದ್ದಾರೆ. ಶಿವಾನಿ ಅವರ ಮಗಳು ಕೂಡ ನಟನ ಸರಳತೆಯನ್ನು ಕೊಂಡಾಡಿದ್ದಾರೆ. ಇನ್ನು ಅಭಿಮಾನಿಗಳ ಬಗ್ಗೆ ಶಾರುಖ್‌ ಹೊಂದಿರುವ ಕಾಳಜಿಯನ್ನು ಕಂಡು ನೆಟ್ಟಿಗರು ಕೂಡ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...