ಅಸಭ್ಯವಾಗಿ ವಿಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ಕನ್ನಡ ನಟ-ನಟಿಯರಿಂದ ಅಭಿಯಾನ

Date:

ನಟಿಯರ ವಿಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವವರ ವಿರುದ್ಧ ಕನ್ನಡದ ನಟ, ನಟಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹವರ ವಿರುದ್ಧ ಅಭಿಯಾನ ಕೈಗೊಂಡಿದ್ದಾರೆ.

ಕನ್ನಡದ ತಾರೆಯರಾದ ಸಪ್ತಮಿ ಗೌಡ, ರಮ್ಯಾ, ರಕ್ಷಿತಾ ಪ್ರೇಮ್, ಆಶಿಕಾ ರಂಗನಾಥ್, ಚೈತ್ರಾ ಜೈ ಆಚಾರ್, ಬೃಂದಾ ಆಚಾರ್ಯ, ರಿತನ್ಯಾ ವಿಜಯ್,ಸಂಜನಾ ಆನಂದ್,ವಾಸುಕಿ ವೈಭವ್, ಅನುಪಮಾ ಗೌಡ, ನಟ ಯುವರಾಜ್‌ ಕುಮಾರ್ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡು ಅಭಿಯಾನ ಶುರುಮಾಡಿದ್ದಾರೆ.

ನಟಿಯರು ಹಂಚಿಕೊಂಡ ಇನ್‌ಸ್ಟಾ ಸ್ಟೋರಿಯಲ್ಲಿ ಏನಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೊಗಳು ಮತ್ತು ಫೋಟೊಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ. ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ, ಇದು ಅವಮಾನಕಾರಿ ಮತ್ತು ಸ್ವೀಕಾರಾರ್ಹವಲ್ಲ’.

ಇದನ್ನು ಓದಿದ್ದೀರಾ? ಫಿಫಾ ವಿಶ್ವಕಪ್ 2026 | ಯುದ್ಧಗಳ ಕಾರ್ಮೋಡದ ನಡುವೆ ಫುಟ್‌ಬಾಲ್ ಹಬ್ಬಕ್ಕೆ 100 ದಿನಗಳ ಕ್ಷಣಗಣನೆ

‘ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಚಿತ್ರೀಕರಿಸುವುದು ನಮ್ಮ ಗೌರವಕ್ಕೆ ಧಕ್ಕೆಯಾಗುತ್ತದೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ’ ಎಂದಿದ್ದಾರೆ.

Kannada Actress insta
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...