ಮೇರು ನಟಿ ಶಬಾನಾ ಅಝ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಅಝ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.

ಪ್ರಶಸ್ತಿ ಜೊತೆ ಗೌರವಧನದ 10 ಲಕ್ಷದ ಚೆಕ್ ನೀಡಲಾಯಿತು. ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.

“ಮಿಲೇಸುರ್ ಮೇರಾ ತುಮಾರಾ” ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಅಝ್ಮಿ ಅವರನ್ನು ಸ್ಮರಿಸಿದರು. ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು.

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಅಝ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...