ಬಿಜೆಪಿ ಬೆಂಬಲಿಸಿದ್ದ ಸುದೀಪ್‌ಗೆ ಸಚಿವ ಕೆ.ಎನ್‌ ರಾಜಣ್ಣ ಕಿವಿಮಾತು

Date:

ನಟರಿಗೆ ರಾಜಕಾರಣದಲ್ಲಿ ಗೌರವ ಇರಲ್ಲ ಎಂದ ರಾಜಣ್ಣ

ವಿರೋಧ ಕಟ್ಟಿಕೊಳ್ಳಬೇಡಿ ಎಂದ ವಾಲ್ಮೀಕಿ ಸಮುದಾಯದ ನಾಯಕ

ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಕಿಚ್ಚ ಸುದೀಪ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯನ್ನು ಬೆಂಬಲಿಸಿದ್ದರು. ಆದರೆ, ಅವರ ಅಬ್ಬರದ ಪ್ರಚಾರದಿಂದ ಬಿಜೆಪಿಗೆ ಹೇಳಿಕೊಳ್ಳುವಂತಹ ಲಾಭ ಆಗಿರಲಿಲ್ಲ. ಕಿಚ್ಚ ರಾಜಕೀಯ ಪಕ್ಷವೊಂದನ್ನು ಬೆಂಬಲಿಸಿದ್ದಕ್ಕೆ ಅಭಿಮಾನಿಗಳು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಚಿವ, ವಾಲ್ಮಿಕಿ ಸಮುದಾಯದ ಮುಖಂಡ ಕೆ.ಎನ್‌ ರಾಜಣ್ಣ ಸುದೀಪ್‌ ಅವರಿಗೆ ಕಿವಿ ಮಾತು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಹರಿಹರ ತಾಲ್ಲೂಕಿನ ರಾಜನಹಳ್ಳಿ ವಾಲ್ಮಿಕಿ ಪೀಠಕ್ಕೆ ಭೇಟಿ ನೀಡಿದ್ದ ರಾಜಣ್ಣ ಸುದೀಪ್‌ ಕುರಿತು ಮಾಧ್ಯಮದವರಿಂದ ಎದುರಾದ ಪ್ರಶ್ನೆಗೆ ಉತ್ತಿರಿಸಿದ್ದು, “ರಾಜ್‌ಕುಮಾರ್‌ ಅವರು ಮನಸ್ಸು ಮಾಡಿದ್ದರೆ ರಾಜಕೀಯಕ್ಕೆ ಬಂದು ಏನು ಬೇಕಾದರೂ ಆಗಬಹುದಿತ್ತು. ಆದರೆ, ಅವರು ರಾಜಕಾರಣದಿಂದ ದೂರ ಉಳಿದಿದ್ದರಿಂದ ಎಲ್ಲ ಸಮುದಾಯದವರು ಅವರನ್ನು ದೇವತಾಮನುಷ್ಯ ಎಂದು ಗುರುತಿಸುತ್ತಾರೆ. ಸಿನಿಮಾ ನಟರು ರಾಜಕೀಯಕ್ಕೆ ಬರುವುದರಿಂದ ಜನರಿಗೆ ಅವರ ಮೇಲಿರುವ ಗೌರವ ಕಡಿಮೆಯಾಗುತ್ತದೆಯೇ ಹೊರತು ಹೆಚ್ಚುವುದಿಲ್ಲ. ಸುದೀಪ್‌ ನಮ್ಮ ಸಮಾಜದ ಮೇರು ನಟ. ಈ ಹಿನ್ನೆಲೆಯಲ್ಲಿ ನಾನು ಅವರಿಗೆ ಕಿವಿಮಾತು ಹೇಳುವುದೇನೆಂದರೆ, ನೀವು ಸಮುದಾಯದ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿ ಗುರುತಿಸಿಕೊಂಡಾಗ ಸಮುದಾಯದವರಿಗೂ ಕೂಡ ನಿಮ್ಮ ಬಗ್ಗೆ ಪರ ಮತ್ತು ವಿರೋಧದ ಅಭಿಪ್ರಾಯಗಳು ಹುಟ್ಟುತ್ತವೆ ಎಂಬ ಎಚ್ಚರಿಕೆ ಇರಲಿ” ಎಂದಿದ್ದಾರೆ.

ಬೊಮ್ಮಾಯಿ ಮಾಮನ ಮೇಲಿರುವ ಪ್ರೀತಿಯಿಂದಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದಿದ್ದ ಸುದೀಪ್‌, ಶ್ರೀರಾಮುಲು, ಬಿ.ಸಿ ಪಾಟೀಲ್‌, ವಿ.ಸೋಮಣ್ಣ, ಕೆ.ಸುಧಾಕರ್‌, ವಿಜಯೇಂದ್ರ ಸೇರಿದಂತೆ 40 ಹೆಚ್ಚು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಆದರೆ, ಆ ಪೈಕಿ 30ಕ್ಕೂ ಹೆಚ್ಚು ಮಂದಿ ಸೋಲನುಭವಿಸಿದ್ದರು. ಕೇವಲ 9 ಮಂದಿ ಮಾತ್ರ ಗೆಲುವು ಸಾಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

ಸುದೀಪ್‌ ಬೆಂಬಲಿಸಿದ್ದ ಅಭ್ಯರ್ಥಿಗಳು ಹೀನಾಯವಾಗಿ ಸೋತ ಬೆನ್ನಲ್ಲೇ ನಟನ ತಾರ ವರ್ಚಸ್ಸು ಬಿಜೆಪಿಗೆ ಸಹಕಾರಿಯಾಗಲಿಲ್ಲ ಎಂಬ ಮಾತುಗಳು ಕೇಳಿಬಂದಿದ್ದವು. ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಲೇ ಸೋಲಿನ ಹೊಣೆ ಹೊತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ, “ಸುದೀಪ್‌ ಸ್ನೇಹಪೂರ್ವಕವಾಗಿ ನಮ್ಮ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದರಷ್ಟೇ ಪಕ್ಷದ ಸೋಲಿಗೆ ಅವರು ಹೊಣೆಯಲ್ಲ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...