ಪುಷ್ಪಾ 2 ಕಾಲ್ತುಳಿತ ಪ್ರಕರಣ | ಅಲ್ಲು ಅರ್ಜುನ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್

Date:

ಪುಷ್ಪಾ 2 ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರಿಗೆ ನೀಡಿರುವ ಜಾಮೀನಿನ ಷರತ್ತುಗಳನ್ನು ಕೋರ್ಟ್ ಸಡಿಲಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿಯ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.

ಆದರೆ ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮುಂದೆ ಹಾಜರಾಗಬೇಕು ಎಂಬ ಷರತ್ತನ್ನು ವಿಧಿಸಿರುವ ಕೋರ್ಟ್ ನಟ ಅಲ್ಲು ಅರ್ಜುನ್‌ಗೆ ವಿದೇಶಕ್ಕೆ ಪ್ರಯಾಣಿಸಲು ಅನುಮತಿ ನೀಡಿದೆ. ಹಾಗತೆಯೇ ಚಾರ್ಜ್‌ಶೀಟ್ ಸಲ್ಲಿಸುವವರೆಗೆ ಪ್ರತಿ ಬಾರಿ ಪ್ರವಾಸ ಮಾಡುವಾಗಲೂ ಪ್ರಯಾಣದ ಬಗ್ಗೆ ಎಚ್‌ಎಸ್‌ಒಗೆ ತಿಳಿಸಬೇಕು, ವಾಸಿಸುವ ಸ್ಥಳದ ವಿವರಗಳನ್ನು ಒದಗಿಸಬೇಕು ಎಂದು ನಿರ್ದೇಶಿಸಲಾಗಿದೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಯಾವುದೇ ರಾಜಿಯಿಲ್ಲ: ರೇವಂತ್ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಕೋರಿ ನಟ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ತೀರ್ಪು ನೀಡಿದೆ. ಜನವರಿ 10ರಂದು ಹೊರಡಿಸಲಾದ ಆದೇಶದಲ್ಲಿ ಇತರೆ ಷರತ್ತುಗಳನ್ನು ಬದಲಾಯಿಸಲಾಗಿಲ್ಲ.

ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಪ್ರದರ್ಶನದ ಸ್ಥಳಕ್ಕೆ ನಟ ಅಲ್ಲು ಅರ್ಜುನ್ ಭೇಟಿ ನೀಡಿದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು ಈ ಪೈಕಿ ಓರ್ವ ಬಾಲಕ ಇನ್ನೂ ಕೂಡಾ ಆಸ್ಪತ್ರೆಯಲ್ಲೇ ದಾಖಲಾಗಿದ್ದಾನೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಗಾಯಾಳು ಬಾಲಕನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಈ ಪ್ರಕರಣಕ್ಕೆ ಸಂಬಂಧಿಸಿ ನಟ ಅಲ್ಲು ಬಂಧನ ಮಾಡಲಾಗಿದ್ದು, ಅದೇ ದಿನ (ಜನವರಿ 3ರಂದು) ಅಲ್ಲು ಅರ್ಜುನ್‌ಗೆ ಜಾಮೀನು ನೀಡಲಾಗಿದೆ. ನ್ಯಾಯಾಲಯವು ಎರಡು ತಿಂಗಳವರೆಗೆ ಅಥವಾ ಚಾರ್ಜ್‌ಶೀಟ್ ಸಲ್ಲಿಸುವವರೆಗೆ (ಯಾವುದು ಮೊದಲು ಅದು ಅನ್ವಯ) ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯ ಒಳಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಹಾಗೆಯೇ ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ಅವರು ದೇಶವನ್ನು ತೊರೆಯುವುದನ್ನು ಸಹ ನಿಷೇಧಿಸಲಾಗಿತ್ತು. ಆದರೆ ಈಗ ಷರತ್ತು ಸಡಿಲಿಕೆ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...