ಅಮೀರ್ ಖಾನ್ ಜೊತೆಗೆ ‘ದಂಗಲ್‌’ನಲ್ಲಿ ನಟಿಸಿದ್ದ ಯುವನಟಿ ಇನ್ನಿಲ್ಲ

Date:

ಅಮೀರ್ ಖಾನ್ ಅವರ ‘ದಂಗಲ್’ ಚಿತ್ರದಲ್ಲಿ ಯುವ ಬಬಿತಾ ಫೋಗಟ್ ಪಾತ್ರವನ್ನು ನಿರ್ವಹಿಸಿದ್ದ ಸುಹಾನಿ ಭಟ್ನಾಗರ್ 19ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

ಯುವ ನಟಿ ಅಕಾಲಿಕ ಸಾವಿನ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದ್ದು, ಇವರ ಸಾವಿಗೆ ಬಳಸುತ್ತಿದ್ದ ಔಷಧಿಯ ಅಡ್ಡ ಪರಿಣಾಮ ಕಾರಣ ಎನ್ನಲಾಗಿದೆ. ‘ದಂಗಲ್’ ಚಿತ್ರದಲ್ಲಿ ಅಮೀರ್‌ ಕಿರಿ ಮಗಳು ಬಬಿತಾ ಪಾತ್ರದಲ್ಲಿ ನಟಿಸಿದ್ದರು.

dangal suhani bhatnagar pic

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

ಜೂನಿಯರ್ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿದ್ದ ಸುಹಾನಿ ಭಟ್ನಾಗರ್ ಇತ್ತೀಚೆಗಷ್ಟೇ ಅಪಘಾತವಾಗಿತ್ತು. ಆ ಅಪಘಾತದಿಂದ ಅವರ ಕಾಲಿನ ಮೂಳೆ ಮುರಿದಿತ್ತು. ಜತೆಗೆ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಸಾವಿಗೆ ನಿಖರ ವಿಚಾರ ಏನು ಎಂಬ ಬಗ್ಗೆ ಅಧಿಕೃತವಾಗಿ ಹೊರಬಿದ್ದಿಲ್ಲವಾದರೂ, ಔಷಧಿ ಮಾತ್ರೆಗಳ ಸೈಡ್‌ ಎಫೆಕ್ಟ್‌ನಿಂದ ಸುಹಾನಿ ನಿಧನರಾಗಿದ್ದಾರೆ ಎನ್ನಲಾಗುತ್ತಿದೆ. ಆಕೆಗೆ ಸೂಚಿಸಿದ ಔಷಧಿಗಳು ಆಕೆಯ ಮೇಲೆ ಅಡ್ಡ ಪರಿಣಾಮಗಳನ್ನು ಬೀರಿದ್ದು, ಆಕೆಯ ದೇಹದಲ್ಲಿ ನಿಧಾನವಾಗಿ ನೀರಿನಾಂಶ ಶೇಖರಣೆ ಪ್ರಾರಂಭವಾಗಿತ್ತು ಎಂದು ವರದಿಗಳು ತಿಳಿಸಿವೆ.

ಕಳೆದ ಕೆಲ ತಿಂಗಳಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಸುಹಾನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು (ಫೆ. 17) ಸುಹಾನಿ ನಿಧನರಾಗಿರುವುದಾಗಿ ವರದಿಯಾಗಿದೆ. ಅಂತ್ಯಕ್ರಿಯೆಯನ್ನು ದೆಹಲಿಯ ಫರಿದಾಬಾದ್‌ನ ಸೆಕ್ಟರ್ -15ರಲ್ಲಿನ ಅಜ್ರೌಂಡಾ ಸ್ಮಶಾನದಲ್ಲಿ ನೆರವೇರಿಸಲು ಕುಟುಂಬದವರು ನಿರ್ಧರಿಸಿರುವುದಾಗಿ ವರದಿಗಳು ತಿಳಿಸಿದೆ.

2016ರಲ್ಲಿ ಬಿಡುಗಡೆಗೊಂಡಿದ್ದ ‘ದಂಗಲ್’ನಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ಸುಹಾನಿ ನಟನೆಗೆ ಭಾರೀ ಪ್ರಶಂಸೆ ವ್ಯಕ್ತವಾಗಿತ್ತು. ನಟನೆ ಮಾತ್ರವಲ್ಲದೆ, ಅನೇಕ ಟಿವಿ ಜಾಹೀರಾತುಗಳಲ್ಲಿಯೂ ಸುಹಾನಿ ಅವಕಾಶ ಗಳಿಸಿದ್ದರು.

‘ದಂಗಲ್’ನಲ್ಲಿನ ನಟನೆಯ ಹಿನ್ನೆಲೆಯಲ್ಲಿ ಸುಹಾನಿಗೆ ಅನೇಕ ಚಿತ್ರಗಳ ಆಫರ್‌ಗಳು ಬಂದಿದ್ದವು. ಆದರೆ ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕಿರುವುದರಿಂದ ನಟನೆಯ ಕಡೆಗೆ ಒಲವು ತೋರಿಸಿರಲಿಲ್ಲ. ಓದು ಮುಗಿದ ಬಳಿಕ ಸಿನಿಮಾಕಡೆ ಬರುವೆ ಎಂದೂ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

2021ರ ನವೆಂಬರ್ 25ರಿಂದ ಈವರೆಗೂ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಸಕ್ರಿಯರಾಗಿರಲಿಲ್ಲ. ಅದಕ್ಕೂ ಮೊದಲು ಸಾಕಷ್ಟು ಪೋಸ್ಟ್‌ಗಳ ಮೂಲಕ ಸುದ್ದಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...