ದರ್ಶನ್‌ ಗನ್‌ ಪರವಾನಗಿ ರದ್ದುಗೊಳಿಸಿದ ಪೊಲೀಸರು

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್‌ ಬಂದೂಕಿನ ಪರವಾನಗಿಯನ್ನು ಪೊಲೀಸರು ರದ್ದುಗೊಳಿಸಿದ್ದಾರೆ.

ಬೆಂಗಳೂರು ಪೊಲಿಸ್ ಆಯುಕ್ತ ಬಿ ದಯಾನಂದ್‌ ಅವರ ಆದೇಶದ ಬೆನ್ನಲ್ಲೇ ದರ್ಶನ್ ಗನ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ತಾತ್ಕಾಲಿಕವಾಗಿ ಗನ್ ಪರವಾನಗಿ ರದ್ದು ಮಾಡಲಾಗಿದೆ. ಪರವಾನಗಿ ರದ್ದು ಮಾಡಿದ್ದ ಬೆನ್ನಲ್ಲೆ ದರ್ಶನ್‌ಗೆ ಆರ್‌ ಆರ್‌ ನಗರ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.

ನೋಟಿಸ್ ಜಾರಿ ಮಾಡಿದ್ದರೂ ಗನ್ ಜಮೆ ಮಾಡಲು ದರ್ಶನ್ ಹಿಂದೇಟು ಹಾಕಿದ್ದರು. ಇಂದು ಖುದ್ದು ಚೆನ್ನಮ್ಮನಕೆರೆಯ ದರ್ಶನ್ ಮನೆಗೆ ತೆರಳಿ ಪೊಲೀಸರು ಗನ್ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲು ಪೊಲೀಸರಿಗೆ ಪತ್ರ ಬರೆದಿದ್ದ ದರ್ಶನ್, ತಮ್ಮ ಬಂದೂಕು ಪರವಾನಗಿಯನ್ನು ರದ್ದು ಮಾಡದಂತೆ ಮನವಿ ಮಾಡಿದ್ದರು. ತಮಗೆ ಭದ್ರತೆಯ ಅವಶ್ಯಕತೆ ಇದ್ದು, ಆ ಕಾರಣಕ್ಕೆ ತಮಗೆ ಬಂದೂಕಿನ ಅಗತ್ಯತೆ ಇದೆಯೆಂದು ಹೇಳಿದ್ದರು. ಆದರೆ ದರ್ಶನ್ ಮನವಿಯನ್ನು ತಿರಸ್ಕರಿಸಿರುವ ಪೊಲೀಸ್ ಇಲಾಖೆ, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಗಿಯುವವರೆಗೆ ಬಂದೂಕನ್ನು ಇರಿಸಿಕೊಳ್ಳುವಂತಿಲ್ಲ ಎಂದು ಹೇಳಿ ತಾತ್ಕಾಲಿಕವಾಗಿ ಪರವಾನಗಿಯನ್ನು ರದ್ದುಗೊಳಿಸಿದೆ.

ಈ ಸುದ್ದಿ ಓದಿದ್ದೀರಾ? ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚಾಕು ಇರಿತ: ರಾತ್ರಿ ಮನೆಗೆ ನುಗ್ಗಿದ್ದ ದುಷ್ಕರ್ಮಿಗಳು

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ಹೈಕೋರ್ಟ್​ ನಿಯಮಿತ ಜಾಮೀನು ನೀಡಿದೆ. ದರ್ಶನ್ ಮಾತ್ರವಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಲಾಗಿದೆ. ಆದರೆ ಪೊಲೀಸರು, ದರ್ಶನ್​ಗೆ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ನಟ ದರ್ಶನ್, ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ವೇಳೆ ತಮ್ಮಿಂದ ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂ. ರೂಪಾಯಿ ಹಣವನ್ನು ಮರಳಿಸುವಂತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ 37 ಲಕ್ಷ ರೂಪಾಯಿ ಹಣ ತಮ್ಮದಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರಿಗೆ ಆ ಮೊತ್ತವನ್ನು ಸಾಲವಾಗಿ ನೀಡಿದ್ದು, ಆ ವ್ಯಕ್ತಿ ಹಣ ಮರಳಿಸಿದ್ದರು. ಅದನ್ನು ಮನೆಯಲ್ಲಿ ಇರಿಸಿಕೊಂಡಿದ್ದೆ ಎಂದು ದರ್ಶನ್​ ಹೇಳಿದ್ದಾರೆ. ಆದರೆ ಪೊಲೀಸರು, ದರ್ಶನ್​ ಬಳಿಯಿಂದ ವಶಪಡಿಸಿಕೊಂಡಿರುವ ಹಣ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮುಚ್ಚಿ ಹಾಕಲು ಇರಿಸಿಕೊಂಡಿದ್ದ ಹಣವಾಗಿತ್ತು ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...