ಪವಿತ್ರಾ ಗೌಡಗೆ ಮನೆ ಊಟಕ್ಕೆ ಹೈಕೋರ್ಟ್ ತಡೆಯಾಜ್ಞೆ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯಿಂದ ಊಟ ತರಿಸಿಕೊಳ್ಳಲು ಅನುಮತಿ ನೀಡಿದ್ದ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಈ ಆದೇಶ ಹೊರಡಿಸಿದ್ದು, “ಕಾನೂನಿಗೆ ಎಲ್ಲರೂ ಸಮಾನರು; ಯಾರೂ ಕಾನೂನಿಗಿಂತ ದೊಡ್ಡವರಲ್ಲ” ಎಂದು ಸ್ಪಷ್ಟಪಡಿಸಿದೆ. ವಿಶೇಷ ಸವಲತ್ತುಗಳು ಜೈಲು ಶಿಸ್ತಿಗೆ ಧಕ್ಕೆ ತರುವುದರ ಜೊತೆಗೆ ಇತರ ಕೈದಿಗಳೂ ಅದೇ ಬೇಡಿಕೆ ಇಡುವ ಸಾಧ್ಯತೆಯಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಜೈಲು ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠವು, ಕಳೆದ ವರ್ಷ ಡಿಸೆಂಬರ್ 29 ಮತ್ತು ಜನವರಿ 12ರಂದು 57ನೇ ಸೆಷನ್ಸ್ ನ್ಯಾಯಾಲಯ ನೀಡಿದ್ದ ಆದೇಶಗಳಿಗೆ ತಡೆ ನೀಡಿದೆ. ಮೂಲ ಆದೇಶದಲ್ಲಿ ಪವಿತ್ರಾ ಗೌಡ ಅವರಿಗೆ ಪ್ರತಿದಿನ ಮನೆ ಊಟ ನೀಡುವಂತೆ ಹೇಳಲಾಗಿತ್ತು; ಪೊಲೀಸ್ ಮೇಲ್ಮನವಿ ಬಳಿಕ ಅದನ್ನು ವಾರಕ್ಕೊಮ್ಮೆಗೆ ಕಡಿಮೆಗೊಳಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...