ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

Date:

ಬಾಲಿವುಡ್​ನ ಹಿರಿಯ ನಟ ಧರ್ಮೇಂದ್ರ ಅವರು ಇಂದು (ನವೆಂಬರ್ 24) ನಿಧನ ಹೊಂದಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಹಲವು ಸಮಯದಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೇವರು ಕರೆದುಕೊಂಡಿದ್ದಾರೆ. ಡಿಸೆಂಬರ್ 8ರಂದು ಅವರು 90ನೇ ವರ್ಷದ ಜನ್ಮದಿನ ಆಚರಿಸಿಕೊಳ್ಳಬೇಕಿತ್ತು.

ಉಸಿರಾಟದ ತೊಂದರೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಧರ್ಮೇಂದ್ರ ಅವರು ಇತ್ತೀಚೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದ್ದರು. ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ಹೇಳಿವೆ.

ಧರ್ಮೇಂದ್ರ ಅವರ ನಿಧನಕ್ಕೆ ಅಭಿಮಾನಿಗಳು, ಚಿತ್ರ ಕಲಾವಿದರು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಧರ್ಮೇಂದ್ರ ಅವರಿಗೆ 2012ರಲ್ಲಿ ಭಾರತ ಸರಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. ಪಂಜಾಬ್‌ನ ಲುಧಿಯಾನಾದ ಹಳ್ಳಿಯೊಂದರಲ್ಲಿ ಜನಿಸಿದ ಧರ್ಮೇಂದ್ರ ಅವರು 19ನೇ ವಯಸ್ಸಿನಲ್ಲಿ ಪ್ರಕಾಶ್ ಕೌರ್ ಅವರನ್ನು ವಿವಾಹವಾಗಿದ್ದರು. ನಂತರ ನಟಿ ಹೇಮಾ ಮಾಲಿನಿ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಅವರು ಪತ್ನಿ ಹೇಮಾ ಮಾಲಿನಿ, ಪುತ್ರರಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್ ಪುತ್ರಿಯರಾದ ವಿಜೇತಾ, ಅಜೀತಾ, ಇಶಾ ಮತ್ತು ಅಹಾನಾ ಅವರನ್ನು ಅಗಲಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ನ ಇತಿಹಾಸವನ್ನೇ ತಿರುಚುತ್ತಿರುವ ಭಾಗವತ್!

ಆರು ದಶಕಗಳಿಗೂ ಅಧಿಕ ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಧರ್ಮೇಂದ್ರ ಅವರು ನೂರಾರು ಚಿತ್ರಗಳಲ್ಲಿ ನಟಿಸಿದ್ದರು. 1960ರಲ್ಲಿ ‘ದಿಲ್ ಭಿ ತೇರಾ ಹಮ್ ಭಿ ತೇರೆ’ ಚಿತ್ರದ ಮೂಲಕ ನಟನೆಯ ಬದುಕು ಆರಂಭಿಸಿದ ಅವರು ‘ಫೂಲ್ ಔರ್ ಪತ್ತರ್’, ‘ಮೇರಾ ಗಾಂವ್ ಮೇರಾ ದೇಶ್’, ‘ಶೋಲೇ’, ‘ಯಾದೋನ್ ಕಿ ಬಾರತ್’, ‘ನೌಕರ್ ಬಿವಿ ಕಾ’ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು.

 ಡಿಸೆಂಬರ್ 25 ರಂದು ಬಿಡುಗಡೆಯಾಗಲಿರುವ ‘ಇಕ್ಕೀಸ್’ ಅವರ ತೆರೆಮೇಲಿನ ಕೊನೆಯ ಚಿತ್ರವಾಗಲಿದೆ.

ತಮ್ಮ 89ನೇ ವಯಸ್ಸಿನಲ್ಲೂ ಧರ್ಮೇಂದ್ರ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದರು. ಆರೋಗ್ಯಕರ ಜೀವನ ಮತ್ತು ಸಾವಯವ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ವಿಡಿಯೊಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿದ್ದರು. ಟ್ರ್ಯಾಕ್ಟರ್ ಓಡಿಸುವುದು, ತಮ್ಮ ತೋಟದ ಮನೆಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಅಭಿಮಾನಿಗಳಿಗೆ ಸರಳ ಜೀವನ ಪಾಠಗಳು ಮತ್ತು ಕೃಷಿ ಸಲಹೆಗಳನ್ನು ನೀಡುವುದು ಅವರ ಇನ್‌ಸ್ಟಾಗ್ರಾಮ್ ಪೋಸ್ಟ್‌ಗಳಲ್ಲಿ ಸಾಮಾನ್ಯವಾಗಿತ್ತು.

ಅಂತಿಮ ದರ್ಶನ ಪಡೆಯಲು ಬಾಲಿವುಡ್‌ ನಟರ ಆಗಮನ

ಧರ್ಮೇಂದ್ರ ಅವರ ಅಂತಿಮ ದರ್ಶನ ಪಡೆಯಲು ಬಾಲಿವುಡ್‌ ನಟರಾದ ಶಾರೂಕ್‌ ಖಾನ್‌, ಅಮೀರ್‌ ಖಾನ್‌, ಸಲ್ಮಾನ್‌ ಖಾನ್‌ ಅವರು ಧರ್ಮೇಂದ್ರ ಅವರ ನಿವಾಸಕ್ಕೆ ತೆರಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...